ADVERTISEMENT

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀವ್ರ ಕುಸಿತ

ಪಿಟಿಐ
Published 28 ಅಕ್ಟೋಬರ್ 2024, 5:57 IST
Last Updated 28 ಅಕ್ಟೋಬರ್ 2024, 5:57 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ನವದೆಹಲಿ: ಸೋಮವಾರವೂ ರಾಷ್ಟ್ರ ರಾಜಧಾನಿ ದೆಹಲಿಯ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ ಮಟ್ಟದಲ್ಲೇ ಇದ್ದು, ಬೆಳಿಗ್ಗೆ 10ರ ಹೊತ್ತಿಗೆ ಗಾಳಿಯ ಗುಣಮಟ್ಟ ಸೂಚ್ಯಂಕ(ಎಕ್ಯೂಐ) 327ರಷ್ಟು ದಾಖಲಾಗಿದೆ.

ಭಾನುವಾರ ಗಾಳಿ ಗುಣಮಟ್ಟ ಸೂಚ್ಯಂಕ 359 ಆಗಿತ್ತು. ಭಾನುವಾರಕ್ಕೆ ಹೋಲಿಸಿದರೆ ಇಂದು ಗಾಳಿ ಗುಣಮಟ್ಟ ಅಲ್ಪ ಸುಧಾರಿಸಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

ADVERTISEMENT

ರಾಜಧಾನಿಯಲ್ಲಿ ಕನಿಷ್ಠ ತಾಪಮಾನ 20.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಎಕ್ಯೂಐ ಮಟ್ಟವು ಸೊನ್ನೆಯಿಂದ 50 ರಷ್ಟಿದ್ದರೆ 'ಉತ್ತಮ' ಎಂದು, 51ರಿಂದ 100 ರಷ್ಟಿದ್ದರೆ 'ಸಮಾಧಾನಕರ', 101 ರಿಂದ 200 ರಷ್ಟಿದ್ದರೆ 'ಸಾಧಾರಣ', 201 ರಿಂದ 300 ರಷ್ಟಿದ್ದರೆ 'ಕಳಪೆ' ಹಾಗೂ 301 ರಿಂದ 400 ರಷ್ಟಿದ್ದರೆ 'ಅತ್ಯಂತ ಕಳಪೆ' ಎಂದು ಹೇಳಲಾಗುತ್ತದೆ. 401ರಿಂದ 450ರಷ್ಟು ಕಂಡು ಬಂದರೆ 'ತೀವ್ರ ಕಳಪೆ' ಹಾಗೂ 450ಕ್ಕಿಂತ ಹೆಚ್ಚಾದರೆ 'ಅತ್ಯಂತ ಅಪಾಯಕಾರಿ' ಎಂದು ಪರಿಗಣಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.