ADVERTISEMENT

ದೆಹಲಿ ಗಾಳಿಯ ಗುಣಮಟ್ಟ 'ತೀವ್ರ ಕಳಪೆ': 418ಕ್ಕೆ ತಲುಪಿದ AQI ಸೂಚ್ಯಂಕ

ಪಿಟಿಐ
Published 14 ನವೆಂಬರ್ 2024, 2:35 IST
Last Updated 14 ನವೆಂಬರ್ 2024, 2:35 IST
   

ನವದೆಹಲಿ: ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಬುಧವಾರ ತೀವ್ರ ಕಳಪೆ ಮಟಕ್ಕೆ ಕುಸಿದಿದೆ. ಈ ಋತುವಿನಲ್ಲಿ ಮೊದಲ ಬಾರಿಗೆ ಎಕ್ಯೂಐ ಸೂಚ್ಯಂಕ 418ಕ್ಕೆ ತಲುಪಿದೆ.

ರಾಷ್ಟ್ರ ರಾಜಧಾನಿಯ 24 ಗಂಟೆಗಳ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ, ಪ್ರತಿದಿನ ಸಂಜೆ 4 ಗಂಟೆಗೆ ದಾಖಲಾಗುತ್ತದೆ. ಮಂಗಳವಾರ ಎಕ್ಯೂಐ 334 ರಷ್ಟಿತ್ತು. ಬುಧವಾರ 418ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತಿಳಿಸಿದೆ.

ದೆಹಲಿಯ 36 ಪರಿವೀಕ್ಷಣಾ ಕೇಂದ್ರಗಳ ಪೈಕಿ, 30 ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ತೀವ್ರ ಕಳಪೆ ದಾಖಲಾಗಿದೆ ಎಂದು ಸಿಪಿಸಿಬಿ ಹೇಳಿದೆ.

ADVERTISEMENT

ಎಕ್ಯೂಐ ಪ್ರಮಾಣ ಸೊನ್ನೆಯಿಂದ 50 ರಷ್ಟಿದ್ದರೆ 'ಉತ್ತಮ' ಎಂದು, 51ರಿಂದ 100 ರಷ್ಟಿದ್ದರೆ 'ಸಮಾಧಾನಕರ', 101 ರಿಂದ 200 ರಷ್ಟಿದ್ದರೆ 'ಸಾಧಾರಣ', 201 ರಿಂದ 300 ರಷ್ಟಿದ್ದರೆ 'ಕಳಪೆ' ಹಾಗೂ 301 ರಿಂದ 400 ರಷ್ಟಿದ್ದರೆ 'ಅತ್ಯಂತ ಕಳಪೆ' ಎಂದು ಹೇಳಲಾಗುತ್ತದೆ. 401ರಿಂದ 450ರಷ್ಟು ಕಂಡು ಬಂದರೆ 'ತೀವ್ರ ಕಳಪೆ' ಹಾಗೂ 450ಕ್ಕಿಂತ ಹೆಚ್ಚಾದರೆ 'ತೀವ್ರಕ್ಕಿಂತಲೂ ಅಪಾಯಕಾರಿ' ಎಂದು ಪರಿಗಣಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.