ಕೊಚ್ಚಿ: ಗಣರಾಜ್ಯೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವೇದಿಕೆಯಲ್ಲಿ ಅವಹೇಳನಕಾರಿ ಪ್ರದರ್ಶನ ನೀಡಿದ ಆರೋಪದಲ್ಲಿ ಕೇರಳ ಹೈಕೋರ್ಟ್ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
ಸಹ ರಿಜಿಸ್ಟ್ರಾರ್ (ಉನ್ನತ ಶ್ರೇಣಿ) ಹಾಗೂ ಕೋರ್ಟ್ ಕೀಪರ್ (ಉನ್ನತ ಶ್ರೇಣಿ) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದ್ದು, ಅವರ ವಿರುದ್ಧ ತನಿಖೆ ನಡೆಸಿ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ತಿಳಿಸಿದ್ದಾರೆ.
ಗುರುತಿನ ಚೀಟಿ ಸಹಿತ ಇಬ್ಬರು ಅಧಿಕಾರಿಗಳು ತಮ್ಮ ಬಳಿ ಇರುವ ಸರ್ಕಾರದ ಎಲ್ಲಾ ಸೊತ್ತುಗಳನ್ನು ಹಿಂದಿರುಗಿಸಬೇಕು ಎಂದು ರಿಜಿಸ್ಟ್ರಾರ್ ಜನರಲ್ ಶುಕ್ರವಾರ ಬಿಡುಗಡೆ ಮಾಡಿದ ಆದೇಶ ಪ್ರತಿಯಲ್ಲಿ ಹೇಳಿದ್ದಾರೆ.
ಅಲ್ಲದೆ ಈ ಬಗ್ಗೆ ವಿಸ್ಕೃತ ತನಿಖೆ ನಡೆಸಿ ಶೀಘ್ರವೇ ವರದಿ ನೀಡುವಂತೆ ರಿಜಿಸ್ಟ್ರಾರ್ (ಕಾವಲು) ಅವರಿಗೆ ಮುಖ್ಯನ್ಯಾಯಮೂರ್ತಿ ಸೂಚಿಸಿದ್ದಾರೆ. ಈ ಘಟನೆ ನಡೆದ ಸಂದರ್ಭದ ಬಗ್ಗೆ ವಿಸ್ಕೃತವಾದ ವರದಿ ನೀಡುವಂತೆ ರಿಜಿಸ್ಟ್ರಾರ್ (ಆಡಳಿತ) ಅವರಿಗೆ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.