ADVERTISEMENT

ಸೋನಮ್ ವಾಂಗ್‌ಚುಕ್ ಬಂಧನ ಸ್ವೀಕಾರಾರ್ಹವಲ್ಲ: ರಾಹುಲ್ ಗಾಂಧಿ

ಪಿಟಿಐ
Published 1 ಅಕ್ಟೋಬರ್ 2024, 2:59 IST
Last Updated 1 ಅಕ್ಟೋಬರ್ 2024, 2:59 IST
<div class="paragraphs"><p>ಸೋನಮ್ ವಾಂಗ್‌ಚುಕ್ ಮತ್ತು ರಾಹುಲ್ ಗಾಂಧಿ</p></div>

ಸೋನಮ್ ವಾಂಗ್‌ಚುಕ್ ಮತ್ತು ರಾಹುಲ್ ಗಾಂಧಿ

   

ನವದೆಹಲಿ: ಶಿಕ್ಷಣ ತಜ್ಞ ಮತ್ತು ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್‌ ಅವರ ಬಂಧನವನ್ನು ಖಂಡಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ‘ಸಾಂವಿಧಾನಿಕ ಹಕ್ಕಿಗಾಗಿ ಪ್ರತಿಭಟಿಸುವವರನ್ನು ಬಂಧಿಸುವುದು ಸ್ವೀಕಾರಾರ್ಹವಲ್ಲ’ ಎಂದಿದ್ದಾರೆ.

ಸಂವಿಧಾನದ ಆರನೇ ಪರಿಚ್ಛೇದಕ್ಕೆ ಲಡಾಖ್‌ ಅನ್ನು ಸೇರಿಸುವಂತೆ ಆಗ್ರಹಿಸಿ ವಾಂಗ್‌ಚುಕ್‌ ನೇತೃತ್ವದಲ್ಲಿ ಸೋಮವಾರ ದೆಹಲಿಗೆ ಪಾದಯಾತ್ರೆ ನಡೆಸಿದ ಲಡಾಖ್‌ನ ಸುಮಾರು 120 ಜನರನ್ನು ದೆಹಲಿ ಗಡಿಯಲ್ಲಿ ಪೊಲೀಸರು ಬಂಧಿಸಿದ್ದರು.

ADVERTISEMENT

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ‘ಸಾಂವಿಧಾನಿಕ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಸೋನಮ್ ವಾಂಗ್‌ಚುಕ್ ಮತ್ತು ನೂರಾರು ಲಡಾಕಿಗಳನ್ನು ಪೊಲೀಸರು ಬಂಧಿಸಿರುವುದು ಸರಿಯಲ್ಲ’ ಎಂದಿದ್ದಾರೆ.

‘ಪ್ರಧಾನಿ ಮೋದಿ ಅವರೇ, ರೈತರ ಪ್ರತಿಭಟನೆಯಂತೆ ಈ ಚಕ್ರವ್ಯೂಹವು ಮುರಿಯಲಿದೆ. ನಿಮ್ಮ ಅಹಂಕಾರವು ಕೂಡ... ಲಡಾಖ್‌ನ ಧ್ವನಿಯನ್ನು ನೀವು ಕೇಳಬೇಕಾಗುತ್ತದೆ’ ಎಂದು ಹೇಳಿದರು.

ಲಡಾಖ್‌ಗೆ ರಾಜ್ಯ ಸ್ಥಾನಮಾನ, ಸಂವಿಧಾನದ ಆರನೇ ಶೆಡ್ಯೂಲ್‌ಗೆ ಸೇರ್ಪಡೆ ಸೇರಿದಂತೆ ಹಲವು ಬೇಡಿಕೆಗಳಿಗೆ ಒತ್ತಾಯಿಸಿ ‘ಲೇಹ್ ಅಪೆಕ್ಸ್ ಬಾಡಿ’ ಈ ಪಾದಯಾತ್ರೆಯನ್ನು ಆಯೋಜಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.