ರಾಂಚಿ: ಕಳೆದ ವರ್ಷ ಜಾರ್ಖಂಡ್‌ನ ಧನಬಾದ್‌ನಲ್ಲಿ ನಡೆದಿದ್ದ ನ್ಯಾಯಾಧೀಶ ಉತ್ತಮ್ ಆನಂದ್ ಹತ್ಯೆ ಪ್ರಕರಣದಲ್ಲಿ ಆಟೋರಿಕ್ಷಾ ಚಾಲಕ ಮತ್ತು ಇನ್ನೊಬ್ಬನನ್ನು ದೋಷಿ ಎಂದು ಜಾರ್ಖಂಡ್‌ನ ವಿಶೇಷ ಸಿಬಿಐ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾಗಿದ್ದ ಆನಂದ್ ಹತ್ಯೆ ಪ್ರಕರಣದಲ್ಲಿ ಆಟೋರಿಕ್ಷಾ ಚಾಲಕ ಲಖನ್ ವರ್ಮಾ ಮತ್ತು ಆತನ ಸಹಚರ ರಾಹುಲ್ ವರ್ಮಾ ತಪ್ಪಿತಸ್ಥರೆಂದು ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ರಜನಿಕಾಂತ್ ಪಾಠಕ್ ತೀರ್ಪು ನೀಡಿದರು.
ಇಬ್ಬರು ಅಪರಾಧಿಗಳ ಶಿಕ್ಷೆಯ ಪ್ರಮಾಣವನ್ನು ಆಗಸ್ಟ್ 6 ರಂದು ಪ್ರಕಟಿಸಲಾಗುತ್ತದೆ ಎಂದು ಕೋರ್ಟ್ ಹೇಳಿದೆ.
49 ವರ್ಷದ ನ್ಯಾಯಾಧೀಶ ಆನಂದ್ ಅವರನ್ನು ಕಳೆದ ವರ್ಷ ಜುಲೈ 28 ರಂದು ಜಾಗಿಂಗ್ ಮಾಡುತ್ತಿದ್ದಾಗ ಆಟೋ ರಿಕ್ಷಾದಿಂದ ಗುದ್ದಿ ಕೊಲ್ಲಲ್ಲಾಗಿತ್ತು.
ನ್ಯಾಯಾಧೀಶ ಆನಂದ್ ಹತ್ಯೆ ಪ್ರಕರಣದ ವಿಚಾರಣೆ ಈ ವರ್ಷದ ಫೆಬ್ರವರಿಯಲ್ಲಿ ಪ್ರಾರಂಭವಾಗಿತ್ತು.
ಧನ್‌ಬಾದ್‌ನ ರಣಧೀರ್ ವರ್ಮಾ ಚೌಕ್‌ನಲ್ಲಿ ನ್ಯಾಯಾಧೀಶರು ರಸ್ತೆಯ ಒಂದು ಬದಿಯಲ್ಲಿ ಜಾಗಿಂಗ್ ಮಾಡುತ್ತಿದ್ದಾಗ ಹಿಂದಿನಿಂದ ಬಂದ ಆಟೋರಿಕ್ಷಾ ಡಿಕ್ಕಿ ಹೊಡೆದು ಪರಾರಿಯಾಗಿರುವುದು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳಲ್ಲಿ ದಾಖಲಾಗಿತ್ತು.
ಪ್ರಕರಣವನ್ನು ಜಾರ್ಖಂಡ್ ಸರ್ಕಾರವು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ)ಹಸ್ತಾಂತರಿಸಿತ್ತು.
ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.