ಬೆಂಗಳೂರು:ಡೀಸೆಲ್ ಬೆಲೆ ಏರಿಕೆ ಮತ್ತು ಟೋಲ್ ಶುಲ್ಕ ಹೆಚ್ಚಳ ಹಾಗೂ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ವಿಧಿಸುತ್ತಿರುವ ನಿಯಮಾವಳಿಗಳ ಸಮಸ್ಯೆ ನಿವಾರಿಸುವಂತೆ ಒತ್ತಾಯಿಸಿ ರಾಷ್ಟ್ರವ್ಯಾಪಿ ರಾರಿ ಮುಷ್ಕರ ಶುಕ್ರವಾರ ಆರಂಭವಾಗಿದೆ.
ರಾಜ್ಯಗಳ ಮಧ್ಯೆ ನಡೆಯುವ ಸರಕುಗಳ ಸಾಗಾಣಿಕೆಗೆ ಇ–ವೇ ಬಿಲ್ ವ್ಯವಸ್ಥೆಯಲ್ಲಿನ ಸಮಸ್ಯೆಗಳು ಹಾಗೂ ಮತ್ತಿತರ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಯುತ್ತಿದೆ.
ಅಖಿಲ ಭಾರತ ಸರಕು ಸಾಗಣೆ ವಾಹನಗಳ ಮಾಲೀಕರ ಸಂಘ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿದೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ ಲಾರಿ ಮಾಲೀಕರು ಸಂಚಾರ ಸ್ಥಗಿತಗೊಳಿಸಿ, ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.