ಲಖನೌ : ರಾಮ ಜನ್ಮಭೂಮಿ–ಬಾಬ್ರಿ ಮಸೀದಿ ಭೂ ವಿವಾದ ಇತ್ಯರ್ಥಗೊಳಿಸಲು ರಚಿಸಲಾಗಿರುವ ಮಧ್ಯಸ್ಥಿಕೆ ಸಮಿತಿಯು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‌ಬಿ) ಪ್ರಧಾನಕಾರ್ಯದರ್ಶಿ ಮೌಲಾನಾ ವಲಿ ರೆಹ್ಮಾನಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದೆ.
ಸಮಿತಿ ಮುಖ್ಯಸ್ಥ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಎಫ್.ಎಂ.ಐ. ಕಲ್ಲಿಫುಲ್ಲಾ ಹಾಗೂ ಸದಸ್ಯ ಶ್ರೀರಾಮ ಪಂಚು ಅವರು ರೆಹ್ಮಾನಿ ಅವರನ್ನು ಭೇಟಿಯಾದರು. ಸಮಿತಿಯ ಇನ್ನೊಬ್ಬ ಸದಸ್ಯರಾಗಿರುವ ಶ್ರೀ ಶ್ರೀ ರವಿಶಂಕರ್ ಗುರೂಜಿ ಈ ಸಂದರ್ಭದಲ್ಲಿ ಇರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.