ADVERTISEMENT

ಪಾಲಕ್ಕಾಡ್‌ ಚುನಾವಣೆ: ಸಂದೀಪ್‌ ವಾರಿಯರ್‌ ಕಾಂಗ್ರೆಸ್‌ ಸೇರ್ಪಡೆ, BJPಗೆ ಹಿನ್ನಡೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2024, 14:33 IST
Last Updated 16 ನವೆಂಬರ್ 2024, 14:33 IST
<div class="paragraphs"><p>ಕಾಂಗ್ರೆಸ್</p></div>

ಕಾಂಗ್ರೆಸ್

   

ತಿರುವನಂತಪುರ: ಕೇರಳದ ಬಿಜೆಪಿ ನಾಯಕ ಸಂದೀಪ್.ಜಿ ವಾರಿಯರ್‌ ಅವರು ಶನಿವಾರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಪಾಲಕ್ಕಾಡ್‌‌ ವಿಧಾನ ಸಭಾ ಕೇತ್ರದಲ್ಲಿ ಉಪಚುನಾವಣೆ ಎದುರಿಸಲು ಸಿದ್ಧವಾಗಿರುವ ಬಿಜೆಪಿಗೆ ಅದೇ ಕ್ಷೇತ್ರದ ಪ್ರಮುಖ ನಾಯಕರೊಬ್ಬರು ದಿಢೀರನೇ ಪಕ್ಷ ತೊರೆದಿರುವುದರಿಂದ ತೀವ್ರ ಮುಖಭಂಗವಾಗಿದೆ.

ADVERTISEMENT

ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಬಳಿಕ ಪ್ರತಿಕ್ರಿಯಿಸಿದ ಸಂದೀಪ್, ‘ದ್ವೇಷಕೂಟದಿಂದ ಹೊರಬಂದು, ಪ್ರೀತಿಯ ಅಂಗಡಿಯ ಸದಸ್ಯನಾಗಿರುವುದು ಸಮಾಧಾನ ತಂದಿದೆ. ವಿವಿಧ ತನಿಖೆಗಳಿಂದ ತಪ್ಪಿಸಿಕೊಳ್ಳಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್‌ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಜೊತೆ ಒಳ‌ಒಪ್ಪಂದ ಮಾಡಿಕೊಂಡಿದ್ದಾರೆ. ಅದನ್ನು ವಿರೋಧಿಸಿದಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದರು’ ಎಂದು ಆರೋಪಿಸಿದ್ದಾರೆ.

ಸಂದೀಪ್‌ ಕಾಂಗ್ರೆಸ್‌ ಸೇರ್ಪಡೆಯ ಬಗ್ಗೆ ಪ್ರತಿಕ್ರಿಯಿಸಿದ ಸುರೇಂದ್ರನ್‌, ‘ಅಧಿಕಾರದ ಆಸೆಯಿಂದ ಸಂದೀಪ್ ಕಾಂಗ್ರೆಸ್‌ಗೆ ಸೇರಿದ್ದಾರೆ. ಇದರಿಂದ ಬಿಜೆಪಿಗೆ ಹಾನಿಯಾಗುವುದಿಲ್ಲ’ ಎಂದು ಹೇಳಿದ್ದಾರೆ. 

ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಬೆನ್ನಲ್ಲೇ ಸಂದೀಪ್ ಅವರು ಪಕ್ಷದ ಅಭ್ಯರ್ಥಿ ರಾಹುಲ್ ಮಾಂಕೂಟತ್ತಿಲ್‌ ಪರ ಪ್ರಚಾರ ನಡೆಸಿದರು.

ಕೆಲ ದಿನಗಳ ಹಿಂದೆ ಸಂದೀಪ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಕೃಷ್ಣಕುಮಾರ್‌ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ಪಕ್ಷದ ನಾಯಕರನ್ನು ಟೀಕಿಸಿದ್ದರು.

ಅದರ ಬೆನ್ನಲ್ಲೇ ಸಿಪಿಎಂನ ಹಿರಿಯ ನಾಯಕರು ಸಂದೀ‍ಪ್‌ ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದರು. ಸಂದೀಪ್ ಕಾಂಗ್ರೆಸ್‌ ಸೇರಿದ್ದರಿಂದ ಸಿಪಿಎಂಗೂ ಮುಖಭಂಗವಾಗಿದೆ.

ಸಂದೀಪ್ ಅವರನ್ನು ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಕೆ.ಸುಧಾಕರನ್‌, ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್‌ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕೇರಳ ಉಸ್ತುವಾರಿ ದೀಪ ದಾಸ್‌ಮುನ್ಶಿ ಅವರು ಪಕ್ಷಕ್ಕೆ ಬರಮಾಡಿಕೊಂಡರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.