ಹೈದರಾಬಾದ್: ತೆಲಂಗಾಣ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಪ್ರಚಾರ ಕಾರ್ಯದಲ್ಲಿ ಸಾಕಷ್ಟು ಶ್ರಮ ಹಾಕಿದ್ದ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಹೈದರಾಬಾದ್‌ನಲ್ಲೇ ಬೀಡು ಬಿಟ್ಟಿದ್ದು, ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ.
ಇನ್ನು ಚುನಾವಣೆ ಫಲಿತಾಂಶದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕೆಸಿಆರ್, ಕೆಟಿಆರ್ ಬಗ್ಗೆ ನಾನು ಯಾವುದೇ ಕಮೆಂಟ್‌ಗಳನ್ನು ಮಾಡುವುದಿಲ್ಲ. ತೆಲಂಗಾಣದ ಜನವೇ ಅವರಿಗೆ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ತೆಲಂಗಾಣ ಜನರು, ಅಭಿವೃದ್ಧಿಗೆ ಇಂದು ತಮ್ಮ ಹಸಿರು ನಿಶಾನೆ ತೋರಿಸಿದ್ದಾರೆ. ಅವರು (ರೇವಂತ್ ರೆಡ್ಡಿ) ಟಿಪಿಸಿಸಿ ಅಧ್ಯಕ್ಷರು, ಅವರು ಟೀಮ್ ಲೀಡರ್. ಸಿಎಂ ಯಾರಾಗಬೇಕು ಎಂಬುದರ ಬಗ್ಗೆ ನಮ್ಮ ಪಕ್ಷವು ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಚುನಾವಣೆಯು ಸಾಮೂಹಿಕ ನಾಯಕತ್ವದ ಮೇಲೆ ನಡೆದಿದೆ ಎಂದು ಹೇಳಿದ್ದಾರೆ. ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ.
119 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 65 ರಲ್ಲಿ ಸ್ಪಷ್ಟ ಮುನ್ನಡೆ ಕಾಯ್ದುಕೊಂಡು ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಧಾಪುಗಾಲು ಹಾಕುತ್ತಿದೆ. ಬಿಆರ್‌ಎಸ್ ತೀವ್ರ ಹಿನ್ನಡೆ ಅನುಭವಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.