ಚೆನ್ನೈ: ತಮಿಳುನಾಡಿನ ಖ್ಯಾತ ನಟ ಹಾಗೂ ಡಿಎಂಡಿಕೆ ಸಂಸ್ಥಾಪಕ ನಾಯಕ 'ಕ್ಯಾಪ್ಟನ್' ವಿಜಯಕಾಂತ್ ಗುರುವಾರ ಬೆಳಗ್ಗೆ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು.
ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೋವಿಡ್ ದೃಢಪಟ್ಟಿತ್ತು. ಉಸಿರಾಟದ ಸಮಸ್ಯೆ ಎದುರಾಗಿದ್ದರಿಂದ ಐಸಿಯುನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.
1979ರಲ್ಲಿ ತೆರೆಕಂಡ ಇನಿಕ್ಕುಮ್ ಇಳಮೈ ಸಿನಿಮಾದ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟ ಅವರು 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. 2005ರಲ್ಲಿ ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ರಾಜಕೀಯ ಪಕ್ಷ ಸ್ಥಾಪನೆ ಮಾಡಿದರು. ಅನಾರೋಗ್ಯ ಕಾರಣಗಳಿಂದ ಡಿಎಂಡಿಕೆ ಪಕ್ಷದ ಜವಾಬ್ದಾರಿಯನ್ನು ವಿಜಯಕಾಂತ್ ಪತ್ನಿ ಪ್ರೇಮಲತಾ ವಹಿಸಿಕೊಂಡಿದ್ದಾರೆ.
2015ರಲ್ಲಿ ತೆರೆಕಂಡ ತಮಿಳಿನ ‘ಸಗಪ್ತಂ’ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.