ಚೆನ್ನೈ: ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಅವರ ಪುತ್ರಿ ಕನಿಮೋಳಿತಿಳಿಸಿದ್ದಾರೆ.
‘ಅವರ ಆರೋಗ್ಯ ಸುಧಾರಿಸಿದೆ. ರಕ್ತದೊತ್ತಡವೂ ಸ್ಥಿರವಾಗಿದೆ’ ಎಂದು ಕನಿಮೋಳಿ ಹೇಳಿದ್ದಾರೆ.
’ರಕ್ತದ ಒತ್ತಡ ಈಗ ನಿಯಂತ್ರಣದಲ್ಲಿದೆ, ಆತಂಕಪಡುವ ಅಗತ್ಯವಿಲ್ಲ’ ಎಂದು ಡಿಎಂಕೆ ಮುಖಂಡ ಎ.ರಾಜಾ ಸಹಹೇಳಿದ್ದಾರೆ.
ಮೂತ್ರನಾಳದ ಸೋಂಕು ಮತ್ತು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಕರುಣಾನಿಧಿ ಅವರಿಗೆ ಗೋಪಾಲಪುರಂನಲ್ಲಿರುವ ಅವರ ನಿವಾಸದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ,ಶುಕ್ರವಾರ ತಡರಾತ್ರಿ ರಕ್ತದ ಒತ್ತಡ ದಿಢೀರ್ ಇಳಿಕೆಯಾದ ಕಾರಣ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತಮಿಳುನಾಡು ರಾಜ್ಯಪಾಲ ಭನ್ವಾರಿಲಾಲ್ ಪುರೋಹಿತ್ ಶನಿವಾರ ಬೆಳಿಗ್ಗೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಎಡಪಕ್ಷಗಳ ಮುಖಂಡರಾದ ಸೀತಾರಾಂ ಯೆಚೂರಿ, ಡಿ. ರಾಜಾ ಮತ್ತಿತರರು ದೂರವಾಣಿ ಮೂಲಕ ಕರಿಣಾನಿಧಿ ಆರೋಗ್ಯ ವಿಚಾರಿಸಿದ್ದಾರೆ.
ಆಸ್ಪತ್ರೆಯ ಹೊರಗೆ ನೂರಾರು ಬೆಂಬಲಿಗರು ಜಮಾಯಿಸಿರುವುದರಿಂದ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಇನ್ನಷ್ಟು ಸುದ್ದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.