ADVERTISEMENT

ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ತಮಿಳು ಅಧಿಕೃತ ಭಾಷೆಯಾಗಲಿ: ಎಂ.ಕೆ.ಸ್ಟಾಲಿನ್ 

​ಪ್ರಜಾವಾಣಿ ವಾರ್ತೆ
Published 5 ಜೂನ್ 2019, 14:12 IST
Last Updated 5 ಜೂನ್ 2019, 14:12 IST
   

ಚೆನ್ನೈ: ತ್ರಿಭಾಷಾ ಸೂತ್ರದಡಿ ಹಿಂದಿ ಭಾಷೆ ಹೇರಿಕೆ ವಿರುದ್ಧ ದನಿಯೆತ್ತಿದ್ದ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್, ಕೇಂದ್ರ ಸರ್ಕಾರದ ಎಲ್ಲ ಕಚೇರಿಗಳಲ್ಲಿ ತಮಿಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಬೇಕೆಂದು ಬುಧವಾರ ಒತ್ತಾಯಿಸಿದ್ದಾರೆ.

ಐಯುಎಂಎಲ್ ಅಧ್ಯಕ್ಷ ಖೈದ್ -ಇ- ಮಿಲ್ಲಟ್ ಅವರ 124ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡಿದಸ್ಟಾಲಿನ್, ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ತಮಿಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಎಂದು ನಾವು ಈ ದಿನ ಶಪಥ ಮಾಡಬೇಕು ಎಂದಿದ್ದಾರೆ.

ತಮಿಳುನಾಡಿನ ವಿಪಕ್ಷ ನಾಯಕರಾದ ಸ್ಟಾಲಿನ್, ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರದಡಿ ಹಿಂದಿ ಹೇರಿಕೆ ಮಾಡಲು ಯತ್ನಿಸಿದ್ದು,ತಮಿಳಿಗರ ವಿರೋಧದಿಂದಾಗಿ ಕೇಂದ್ರ ಈ ನಿರ್ಧಾರವನ್ನು ವಾಪಸ್ ಪಡೆದುಕೊಂಡಿದೆ ಎಂದಿದ್ದಾರೆ.

ADVERTISEMENT

ಸಿ.ಎನ್.ಅಣ್ಣಾದೊರೈ ಸಿದ್ಧಪಡಿಸಿದದ್ವಿಭಾಷಾ ಸೂತ್ರವನ್ನು ದೇಶದಾದ್ಯಂತ ಅನುಷ್ಠಾನಗೊಳಿಸಬೇಕು ಎಂದು ಮಂಗಳವಾರ ಡಿಎಂಕೆ ಪ್ರಸ್ತಾಪ ಮುಂದಿಟ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.