ಕೋಲ್ಕತ್ತ: ಇತ್ತೀಚೆಗೆ ಸ್ಪೇನ್ ಮತ್ತು ದುಬೈ ಪ್ರವಾಸದ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೊಣಕಾಲಿಗೆ ಗಾಯವಾಗಿದ್ದು, 10 ದಿನಗಳವರೆಗೆ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.
ಬ್ಯಾನರ್ಜಿ ಅವರು ಆರೋಗ್ಯ ತಪಾಸಣೆಗೆಂದು ರಾಜ್ಯದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ತೆರಳಿದ್ದ ವೇಳೆ, ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದ ನಂತರ ಈ ಸಲಹೆ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಕಳೆದ ವಾರ ವಿದೇಶ ಪ್ರವಾಸದ ವೇಳೆ ಬ್ಯಾನರ್ಜಿ ಅವರ ಎಡ ಮೊಣಕಾಲಿಗೆ ಗಾಯವಾಗಿದ್ದು ನೋವಿನಿಂದ ಬಳಲುತ್ತಿದ್ದರು. ಈ ವರ್ಷದ ಆರಂಭದಲ್ಲಿ ಹೆಲಿಕಾಪ್ಟರ್‌ನಿಂದ ಇಳಿಯುವಾಗ ಅದೇ ಮೊಣಕಾಲಿಗೆ ಗಾಯವಾಗಿತ್ತು. ಕೆಲವು ಪರೀಕ್ಷೆಗಳನ್ನು ನಡೆಸಿದ ನಂತರ 10 ದಿನಗಳವರೆಗೆ ಎಲ್ಲಿಯೂ ಹೋಗದೆ ವಿಶ್ರಾಂತಿ ತೆಗೆದುಕೊಳ್ಳಬೇಕೆಂದು ನಾವು ಅವರಿಗೆ ಸಲಹೆ ನೀಡಿದ್ದೇವೆ’ ಎಂದು ವೈದ್ಯರು ತಿಳಿಸಿದ್ದಾರೆ.
ಜೂನ್‌ನಲ್ಲಿ ಎಡ ಮೊಣಕಾಲಿನ ಅಸ್ಥಿರಜ್ಜು ಗಾಯಕ್ಕೆ ಒಳಗಾಗಿದ್ದ ತೃಣಮೂಲ ಕಾಂಗ್ರೆಸ್ ನಾಯಕಿ ಬ್ಯಾನರ್ಜಿ ಅವರು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.