ADVERTISEMENT

ಐಟಿ ಕಾಯ್ದೆ ಸೆಕ್ಷನ್‌ 66–ಎ ಅಡಿ ಪ್ರಕರಣ ದಾಖಲಿಸದಂತೆ ಕೇಂದ್ರ ಸೂಚನೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2021, 15:54 IST
Last Updated 14 ಜುಲೈ 2021, 15:54 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ 66–ಎ ರದ್ದಾಗಿರುವ ಕಾರಣ, ಈ ಸೆಕ್ಷನ್‌ ಅಡಿ ಪ್ರಕರಣಗಳನ್ನು ದಾಖಲಿಸಬಾರದು ಎಂದು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆಕೇಂದ್ರ ಗೃಹ ಸಚಿವಾಲಯ ಬುಧವಾರ ಸೂಚನೆ ನೀಡಿದೆ.

ಈ ಸೆಕ್ಷನ್‌ ಅಡಿ ಈಗಾಗಲೇ ದಾಖಲಿಸಿರುವ ಪ್ರಕರಣಗಳನ್ನು ಕೂಡಲೇ ಹಿಂಪಡೆಯುವಂತೆಯೂ ಸಚಿವಾಲಯ ಸೂಚಿಸಿದೆ.

ರದ್ದಾಗಿದ್ದರೂ ಈಗಲೂ ಈ ಸೆಕ್ಷನ್‌ನಡಿ ಪ್ರಕರಣಗಳು ದಾಖಲಾಗುತ್ತಿರುವುದಕ್ಕೆ ಸುಪ್ರೀಂಕೋರ್ಟ್‌ ಇತ್ತೀಚೆಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ ಗೃಹ ಸಚಿವಾಲಯ ಈ ಸೂಚನೆ ನೀಡಿದೆ.

ADVERTISEMENT

ಐಟಿ ಕಾಯ್ದೆ ಸೆಕ್ಷನ್‌66–ಎ ಕಠೋರ ಹಾಗೂ ಅಸಾಂವಿಧಾನಿಕ ಎಂದು ಅಭಿಪ್ರಾಯಪಟ್ಟಿದ್ದ ಸುಪ್ರೀಂಕೋರ್ಟ್‌, 2015ರ ಮಾರ್ಚ್‌ 23ರಂದು ಈ ಸೆಕ್ಷನ್‌ಅನ್ನು ರದ್ದುಪಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.