ADVERTISEMENT

ಸದ್ಯ ತೇಲ್ತುಂಬ್ಡೆ ಬಂಧನ ಇಲ್ಲ

ಹೈಕೋರ್ಟ್‌ಗೆ ಪುಣೆ ಪೊಲೀಸರ ಹೇಳಿಕೆ

ಪಿಟಿಐ
Published 5 ಫೆಬ್ರುವರಿ 2019, 19:04 IST
Last Updated 5 ಫೆಬ್ರುವರಿ 2019, 19:04 IST
ತೇಲ್ತುಂಬ್ಡೆ
ತೇಲ್ತುಂಬ್ಡೆ   

ಮುಂಬೈ: ದಲಿತ ಚಿಂತಕ ಆನಂದ್ ತೇಲ್ತುಂಬ್ಡೆ ಅವರನ್ನು ಫೆಬ್ರುವರಿ 12ರ ಮಧ್ಯರಾತ್ರಿವರೆಗೆ ಬಂಧಿಸುವುದಿಲ್ಲ ಎಂದು ಪುಣೆ ಪೊಲೀಸರು ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಕೋರೆಗಾಂವ್‌–ಭೀಮಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ತೇಲ್ತುಂಬ್ಡೆ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಪೊಲೀಸರು ಈ ಹೇಳಿಕೆ ನೀಡಿದ್ದಾರೆ.

2018ರ ಜನವರಿ 1ರಂದು ಕೋರೆಗಾಂವ್‌–ಭೀಮಾದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತೇಲ್ತುಂಬ್ಡೆ ವಿರುದ್ಧವೂ ಆರೋಪ ಹೊರಿಸಲಾಗಿದೆ. ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆ (ಯುಎಪಿಎ) ಅಡಿಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ADVERTISEMENT

ನ್ಯಾಯಮೂರ್ತಿ ಎನ್‌.ಡಬ್ಲ್ಯು. ಸಾಂಬ್ರೆ ಅವರ ಪೀಠ ಈ ಪ್ರಕರಣದ ವಿಚಾರಣೆಯನ್ನು ಫೆ.11ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.