ADVERTISEMENT

ಟಿಎಂಸಿ ಜೊತೆ ಮೈತ್ರಿಗೆ ಬಾಗಿಲು ತೆರೆದಿದೆ: ಕಾಂಗ್ರೆಸ್

ಪಿಟಿಐ
Published 3 ಮಾರ್ಚ್ 2024, 12:54 IST
Last Updated 3 ಮಾರ್ಚ್ 2024, 12:54 IST
<div class="paragraphs"><p>ಟಿಎಂಸಿ</p></div>

ಟಿಎಂಸಿ

   

ಗ್ವಾಲಿಯರ್: ಪಶ್ಚಿಮ ಬಂಗಾಳದ ಎಲ್ಲ ಲೋಕಸಭಾ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೀರ್ಮಾನಿಸಿದ್ದರೂ, ಟಿಎಂಸಿ ಜೊತೆ ಮೈತ್ರಿಗೆ ಬಾಗಿಲು ತೆರೆದಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ.

ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದಲ್ಲಿ ಇರುವುದಾಗಿ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಹೇಳಿರುವ ಮಾತಿನ ಅರ್ಥ, ತಮ್ಮ ಆದ್ಯತೆ ಬಿಜೆಪಿಯನ್ನು ಸೋಲಿಸುವುದು ಎಂದು ಭಾವಿಸಿರುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ADVERTISEMENT

‘ನಾವು ಬಾಗಿಲು ಮುಚ್ಚಿಲ್ಲ. ಪಶ್ಚಿಮ ಬಂಗಾಳದ ಎಲ್ಲ 42 ಸ್ಥಾನಗಳಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ಅವರು ಏಕಪಕ್ಷೀಯವಾಗಿ ಘೋಷಿಸಿದ್ದಾರೆ. ಮಾತುಕತೆ ಇನ್ನೂ ನಡೆಯುತ್ತಿದೆ. ಅಂತಿಮ ಮಾತು ಹೊರಬಿದ್ದಿಲ್ಲ’ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.