ADVERTISEMENT

ಉಪ್ಪಿನ ಪ್ಯಾಕೆಟ್‌ನಲ್ಲಿ ₹500 ಕೋಟಿ ಮೌಲ್ಯದ ಕೊಕೇನ್ ಕಳ್ಳಸಾಗಣೆ ಪತ್ತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಮೇ 2022, 2:58 IST
Last Updated 27 ಮೇ 2022, 2:58 IST
   

ಬೆಂಗಳೂರು: ಗುಜರಾತ್‌ನ ಕಛ್ ಜಿಲ್ಲೆಯ ಮುಂದ್ರಾ ಬಂದರಿನಲ್ಲಿ ₹500 ಕೋಟಿಗೂ ಅಧಿಕ ಮೌಲ್ಯದ 52 ಕೆಜಿ ಕೊಕೇನ್ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಇರಾನ್‌ನಿಂದ ಆಮದು ಮಾಡಿಕೊಂಡಿದ್ದ ಉಪ್ಪು ಪ್ಯಾಕೆಟ್‌ನಲ್ಲಿ ಕೊಕೇನ್‌ ಅನ್ನು ಅಡಗಿಸಿ ಇರಿಸಲಾಗಿತ್ತು ಎಂದು ಡಿಆರ್‌ಐ ಹೇಳಿದೆ.

ಗುಪ್ತಚರ ಮಾಹಿತಿಯ ಮೇರೆಗೆ ಮೇ 24ರಿಂದ 26ರ ವರೆಗೆ ‘ಆಪರೇಷನ್ ನಮಕೀನ್‘ ಹೆಸರಿನ ಕಾರ್ಯಾಚರಣೆಯನ್ನು ಡಿಆರ್‌ಐ ಅಧಿಕಾರಿಗಳು ನಡೆಸಿದ್ದು, ಈ ಸಂದರ್ಭದಲ್ಲಿ ಉಪ್ಪಿನ ಪ್ಯಾಕೆಟ್‌ನಲ್ಲಿ ಕೊಕೇನ್ ಕಳ್ಳಸಾಗಣೆ ನಡೆಸಿರುವುದು ಪತ್ತೆಯಾಗಿದೆ.

ADVERTISEMENT

ದೇಶದಲ್ಲಿ 2021 ಮತ್ತು 2022ನೇ ಸಾಲಿನಲ್ಲಿ ಈವರೆಗೆ 321 ಕೆ.ಜಿ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅದರ ಮೌಲ್ಯ ₹3,200 ಕೋಟಿ ಆಗಿದೆ ಎಂದು ಡಿಆರ್‌ಐ ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.