ಮುಂಬೈ: ನಗರದ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವೆನೆಜುವೆಲಾದಿಂದ ಆಗಮಿಸಿದ ಪ್ರಯಾಣಿಕರೊಬ್ಬರ ಬಳಿ ₹6.2 ಕೋಟಿ ಮೌಲ್ಯದ 628 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ತಿಳಿಸಿದ್ದಾರೆ.
ಮಾದಕವಸ್ತುಗಳ ಅಕ್ರಮ ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಅಂತರರಾಷ್ಟ್ರೀಯ ಸಿಂಡಿಕೇಟ್‌ನ ಸದಸ್ಯರ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಡಿಆರ್‌ಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಡಿಆರ್‌ಐ ಅಧಿಕಾರಿಗಳು ವೆನೆಜುವೆಲಾ ಆಗಮಿಸಿದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಆರೋಪಿ ಬಳಿ ₹6.2 ಕೋಟಿ ಮೌಲ್ಯದ 628 ಗ್ರಾಂ ಕೊಕೇನ್ ಹೊಂದಿರುವ ಒಟ್ಟು 57 ಕ್ಯಾಪ್ಸುಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಂಧಿತ ಆರೋಪಿ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.