ADVERTISEMENT

ಮುಂಬೈ ವಿಮಾನ ನಿಲ್ದಾಣದಲ್ಲಿ ₹100 ಕೋಟಿಗೂ ಅಧಿಕ ಮೌಲ್ಯದ ಹೆರಾಯಿನ್ ವಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಅಕ್ಟೋಬರ್ 2022, 14:17 IST
Last Updated 6 ಅಕ್ಟೋಬರ್ 2022, 14:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮುಂಬೈ ವಿಮಾನ ನಿಲ್ದಾಣದಲ್ಲಿ ₹100 ಕೋಟಿಗೂ ಹೆಚ್ಚು ಮೌಲ್ಯದ 16 ಕೆ.ಜಿ ಹೆರಾಯಿನ್ ವಶಪಡಿಸಿಕೊಂಡಿದ್ದು, ಈ ಸಂಬಂಧ ಘಾನಾದ ಪ್ರಯಾಣಿಕ ಹಾಗೂ ಮಹಿಳೆಯೊಬ್ಬರನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಘಾನಾ ಮಹಿಳೆಯನ್ನು ದೆಹಲಿ ಹೋಟೆಲ್‌ನಲ್ಲಿ ಬಂಧಿಸಲಾಯಿತು. ಆಫ್ರಿಕನ್ ದೇಶ ಮಲಾವಿಯಿಂದ ಕತಾರ್ ಮೂಲಕ ಮುಂಬೈಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಮಾದಕ ವಸ್ತುಗಳನ್ನು ದೇಶಕ್ಕೆ ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಸುಳಿವಿನ ಮೇರೆಗೆ ಡಿಆರ್‌ಐನ ಮುಂಬೈ ಘಟಕ ಮಂಗಳವಾರ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೆ ಬೆಲೆ ಬೀಸಿತು ಎಂದು ಅವರು ಹೇಳಿದರು.

ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಪ್ರಯಾಣಿಕನ ತಪಾಸಣೆ ನಡೆಸಿದಾಗ ಟ್ರಾಲಿ ಬ್ಯಾಗ್‌ಗಳಲ್ಲಿ ಬಚ್ಚಿಟ್ಟಿದ್ದ 16 ಕೆ.ಜಿ ಹೆರಾಯಿನ್ ಪತ್ತೆಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ ₹ 100 ಕೋಟಿ. ಮುಂಬೈ ಸ್ಥಳೀಯ ನ್ಯಾಯಾಲಯ ಪ್ರಯಾಣಿಕನನ್ನು ಡಿಆರ್‌ಐ ವಶಕ್ಕೆ ನೀಡಿದೆ. ಹೋಟೆಲ್‌ ನಲ್ಲಿ ಮಾದಕ ವಸ್ತು ಪಡೆಯಲು ಬಂದ ಮಹಿಳೆಯನ್ನು ಬಂಧಿಸಲಾಯಿತು. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.