ಮುಂಬೈ: ಇಲ್ಲಿನ ಏರ್ ಕಾರ್ಗೋ ಕಾಂಪ್ಲೆಕ್ಸ್‌ನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ₹2.4 ಕೋಟಿ ಮೌಲ್ಯದ ಸಿಗರೇಟ್ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯವು ವಶಪಡಿಸಿಕೊಂಡಿದೆ. ಈ ಸಂಬಂಧ ಓರ್ವ ವ್ಯಕ್ತಿಯನ್ನು ಬಂಧಿಸಿದೆ ಎಂದು ಡಿಆರ್‌ಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುಪ್ತಚರ ಇಲಾಖೆ ನೀಡಿದ ಮಾಹಿತಿ ಮೇರೆಗೆ ದುಬೈನಿಂದ ಬಂದ ಆಮದು ಸರಕುಗಳನ್ನು ತಡೆ ಹಿಡಿದು ಅಧಿಕಾರಿಗಳು ತಪಾಸಣೆ ನಡೆಸಿದರು. ಪರಿಶೀಲನೆ ವೇಳೆ ಬಟ್ಟೆಗಳ ಮಧ್ಯದಲ್ಲಿ ಸಿಗರೇಟ್ ಪೆಟ್ಟಿಗೆಗಳನ್ನು ಬಚ್ಚಿಡಲಾಗಿತ್ತು ಎಂದು ಅವರು ಹೇಳಿದ್ದಾರೆ.
ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು ₹2.4 ಕೋಟಿ ಮೌಲ್ಯದ ಸಿಗರೇಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಕಳ್ಳಸಾಗಣೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.