ಚಂಡೀಗಢ: ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಪಂಜಾಬ್‌ನ ತರಣ್ ತಾರಣ್ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆಯ ಸೈನಿಕರು ಸೋಮವಾರ ಡ್ರೋನ್‌ವೊಂದನ್ನು ವಶಕ್ಕೆ ಪಡೆದಿದ್ದಾರೆ.
ಕಳೆದ ಒಂದು ವಾರದಲ್ಲಿ ಪಂಜಾಬ್‌ನ ವಿವಿಧೆಡೆಗಳಲ್ಲಿ ಬಿಎಸ್‌ಎಫ್ ಸಿಬ್ಬಂದಿ ವಶಪಡಿಸಿಕೊಂಡ ಎಂಟನೇ ಡ್ರೋನ್ ಇದಾಗಿದೆ.
ಗಡಿಯಲ್ಲಿ ಹೆರಾಯಿನ್ ಕಳ್ಳಸಾಗಣೆ ಮಾಡಲು ಪಾಕಿಸ್ತಾನವು ಡ್ರೋನ್ ಬಳಸುತ್ತಿದೆ.
ಖಚಿತ ಮಾಹಿತಿ ಆಧರಿಸಿ ಬಿಎಸ್‌ಎಫ್ ಮತ್ತು ಪೊಲೀಸರು ತರಣ್ ತಾರಣ್ ಜಿಲ್ಲೆಯ ಮೆಹ್ದಿಪುರ ಗ್ರಾಮದಲ್ಲಿ ಸೋಮವಾರ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಚೀನಾ ನಿರ್ಮಿತ ಕ್ವಾಡ್‌ಕಾಪ್ಟರ್ (ಡ್ರೋನ್) ಅನ್ನು ಜಮೀನಿನಲ್ಲಿ ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಒಂದು ವಾರದಲ್ಲಿ ಪಾಕಿಸ್ತಾನದ ಎಂಟು ಡ್ರೋನ್‌ಗಳನ್ನು ಹೊಡೆದುರುಳಿಸಿರುವ ಬಿಎಸ್‌ಎಫ್ ಸಿಬ್ಬಂದಿ 5 ಕೆ.ಜಿ ಹೆರಾಯಿನ್ ವಶಕ್ಕೆ ಪಡೆದಿದ್ದಾರೆ.
ಗಡಿಯಲ್ಲಿ ಮಾದಕ ವಸ್ತುಗಳನ್ನು ಕಳ್ಳಸಾಗಣೆ ಮಾಡಲು ಬಳಸುತ್ತಿರುವ ಈ ಎಲ್ಲ ಡ್ರೋನ್‌ಗಳು ಚೀನಾ ನಿರ್ಮಿತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.