ಚಂಡೀಗಢ:ಪಂಜಾಬ್ ಪೊಲೀಸರು ಮತ್ತು ಗಡಿ ಭದ್ರತಾ ಪಡೆ ಜಂಟಿ ಕಾರ್ಯಾಚರಣೆ ನಡೆಸಿಪಂಜಾಬ್‌ನ ತರ್ನ್ ತರನ್ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿ ಮೂರು ಕೆ.ಜಿ ಹೆರಾಯಿನ್ ಸಹಿತ ಡ್ರೋನ್ ವಶಪಡಿಸಿಕೊಳ್ಳಲಾಗಿದೆ.
‘ಗಡಿಯಾಚೆಗಿನ ಕಳ್ಳಸಾಗಣೆ ಜಾಲಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರಿಸಿರುವ ತರ್ನ್ ತರನ್ ಪೊಲೀಸರು ಮತ್ತು ಬಿಎಸ್ಎಫ್ ಜಂಟಿ ಕಾರ್ಯಾಚರಣೆಯಲ್ಲಿ ಪಿಎಸ್ ವಾಲ್ತೋಹಾ ಪ್ರದೇಶದಲ್ಲಿ ಶೋಧ ನಡೆಸಿದಾಗ 3 ಕೆ.ಜಿ ಹೆರಾಯಿನ್ ಹೊಂದಿರುವ ಕ್ವಾಡ್ಕಾಪ್ಟರ್ ಡ್ರೋನ್ ಅನ್ನು ವಶಪಡಿಸಿಕೊಂಡಿದ್ದಾರೆ" ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಟ್ವೀಟ್ ಮಾಡಿದ್ದಾರೆ.
ಗಡಿ ಭದ್ರತಾ ಪಡೆ ಸುಮಾರು 25 ಕೆ.ಜಿ ಹೆರಾಯಿನ್ ವಶಪಡಿಸಿಕೊಂಡ ಒಂದು ದಿನದ ನಂತರ ಈ ಘಟನೆ ನಡೆದಿದೆ.
ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿ,ತರ್ನ್ ತರನ್ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿಯ ಹೊಲದಲ್ಲಿ 5 ಕೆ.ಜಿ ಹೆರಾಯಿನ್ ನೊಂದಿಗೆ ಡ್ರೋನ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಮೃತಸರ ಮತ್ತುತರ್ನ್ ತರನ್ಭಾರತ-ಪಾಕಿಸ್ತಾನ ಗಡಿಯಲ್ಲಿ ಸೋಮವಾರ ಸುಮಾರು 10 ಕೆ.ಜಿ ಹೆರಾಯಿನ್ ಸಾಗಿಸುತ್ತಿದ್ದ ಪಾಕಿಸ್ತಾನದ ಎರಡು ಡ್ರೋನ್‌ಗಳನ್ನು ಬಿಎಸ್ಎಫ್ ಹೊಡೆದುರುಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.