ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಡಿಯುಎಸ್‌ಯು) ಕೇಂದ್ರ ಸಮಿತಿಯ ನಾಲ್ಕು ಸ್ಥಾನಗಳಿಗೆ ಶನಿವಾರ ನಡೆದ ಚುನಾವಣೆಯಲ್ಲಿ ಎಬಿವಿಪಿ ಮೂರು ಸ್ಥಾನಗಳನ್ನು ಮತ್ತು ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ ಒಂದು ಸ್ಥಾನವನ್ನು ಗೆದ್ದುಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನ ತುಷಾರ್ ದೆಢಾ ಅವರು ಎನ್‌ಎಸ್‌ಯುಐನ ಹಿತೇಶ್ ಗುಲಿಯಾ ಅವರನ್ನು ಸೋಲಿಸಿ ಡಿಯುಎಸ್‌ಯು ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಎನ್‌ಎಸ್‌ಯುಐನ ಅಭಿ ದಾಹಿಯಾ, ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿಯಾಗಿ ಎಬಿವಿಪಿಯ ಅಪರಾಜಿತ ಮತ್ತು ಸಚಿನ್ ಬೈಸ್ಲಾ ಅವರು ಆಯ್ಕೆಯಾದರು.
ಈ ನಾಲ್ಕು ಸ್ಥಾನಗಳಿಗೆ 24 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಎಬಿವಿಪಿ ಮತ್ತು ಎನ್‌ಎಸ್‌ಯುಐ ನಡುವೆ ನೇರಾ ಹಣಾಹಣಿ ಏರ್ಪಟ್ಟಿತ್ತು.
2019ರ ಚುನಾವಣೆಯಲ್ಲೂ ಇದೇ ರೀತಿ ಎಬಿವಿಪಿ ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನು, ಎನ್‌ಎಸ್‌ಯುಐ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿತ್ತು. ಕೋವಿಡ್ ಕಾರಣಕ್ಕೆ ಆ ಬಳಿಕ ಚುನಾವಣೆಗಳು ನಡೆದಿರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.