ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ ನೆರೆಯ ದೇಶ ನೇಪಾಳದಲ್ಲಿ ಭಾನುವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ.
ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ವ್ಯಾಪ್ತಿಯಲ್ಲಿ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ನೇಪಾಳ ರಾಜಧಾನಿ ಕಠ್ಮಂಡುವಿನ ವಾಯುವ್ಯದಲ್ಲಿರುವ ಬಜೂರಾ, ದಹಾಕೋಟ್‌ನಲ್ಲಿ ಶನಿವಾರ ತಡರಾತ್ರಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆಯ ಕಂಪನ ದಾಖಲಾಗಿದೆ.
ಭೂಕಂಪನ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ಭೂಮಿ ನಡುಗಿದ್ದು, ಸ್ಥಳೀಯರು ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಯಾವುದೇ ಹಾಸ್ತಿ, ಪ್ರಾಣ ಹಾನಿ ಸಂಭವಿಸಿಲ್ಲ ಎಂದು ನೇಪಾಳ ಸರ್ಕಾರ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.