ADVERTISEMENT

ಆಸಿಯಾನ್ ದೇಶಗಳೊಂದಿಗೆ ಬಾಂಧವ್ಯ ಗಟ್ಟಿಗೊಳಿಸಲು ಶೃಂಗಸಭೆ ಸಹಕಾರಿ: ಮೋದಿ

ಪಿಟಿಐ
Published 10 ಅಕ್ಟೋಬರ್ 2024, 5:04 IST
Last Updated 10 ಅಕ್ಟೋಬರ್ 2024, 5:04 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ</p></div>

ಪ್ರಧಾನಿ ನರೇಂದ್ರ ಮೋದಿ

   

ಪಿಟಿಐ

ನವದೆಹಲಿ: 21ನೇ ಆಸಿಯಾನ್-ಭಾರತ ಮತ್ತು 19ನೇ ಪೂರ್ವ ಏಷ್ಯಾ ಶೃಂಗಸಭೆಗಳಲ್ಲಿ ಪಾಲ್ಗೊಳ್ಳಲು ಭಾರತ ಪ್ರಧಾನಿ ನರೇಂದ್ರ ಮೋದಿ ಲಾವೋಸ್‌ಗೆ ತೆರಳಿದ್ದಾರೆ. ಈ ಭೇಟಿಯು ಆಸಿಯಾನ್ ದೇಶಗಳೊಂದಿಗಿನ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸಲು ಸಹಕಾರಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

‘ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯಲ್ಲಿನ ಪ್ರಗತಿ ಪರಿಶೀಲಿಸಲು ಮತ್ತು ನಮ್ಮ ಸಹಕಾರ ಭವಿಷ್ಯದ ಬಗ್ಗೆ ಚರ್ಚಿಸಲು ನಾನು ಆಸಿಯಾನ್‌ ನಾಯಕರನ್ನು ಭೇಟಿಯಾಗುತ್ತಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.

ಪೂರ್ವ ಏಷ್ಯಾ ಶೃಂಗಸಭೆಯು ಇಂಡೋ–ಪೆಸಿಫಿಕ್‌ ಪ್ರದೇಶಗಳಲ್ಲಿನ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯ ಸವಾಲುಗಳ ಕುರಿತು ಚರ್ಚಿಸಲು ಅವಕಾಶವನ್ನು ಒದಗಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

ಲಾವೋಸ್‌ ಸೇರಿದಂತೆ ಈ ಪ್ರದೇಶಗಳೊಂದಿಗೆ ಭಾರತ ನಿಕಟ ಸಾಂಸ್ಕೃತಿಕ ಮತ್ತು ನಾಗರಿಕತೆಯ ಸಂಬಂಧಗಳನ್ನು ಹಂಚಿಕೊಂಡಿದೆ. ಇದು ಬೌದ್ಧಧರ್ಮ ಮತ್ತು ರಾಮಾಯಣದ ಪರಂಪರೆಯಿಂದ ಸಮೃದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

‘ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಲಾವೋಸ್‌ ನಾಯಕರೊಂದಿಗೆ ನನ್ನ ಸಭೆಗಳನ್ನು ನಾನು ಎದುರು ನೋಡುತ್ತಿದ್ದೇನೆ’ ಎಂದು ಮೋದಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ (ಗುರುವಾರ) ಎರಡು ದಿನಗಳ ಲಾವೋಸ್‌ ಪ್ರವಾಸ ಕೈಗೊಂಡಿದ್ದಾರೆ. ಈ ಭೇಟಿ ವೇಳೆ ಅವರು ಲಾವೋಸ್ ಪ್ರಧಾನಿ ಹಾಗೂ ಇತರ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.