ADVERTISEMENT

ಚಂಡಮಾರುತ ಅಪ್ಪಳಿಸುವ ಸಾಧ್ಯತೆ: ಭಾರಿ ಮಳೆ ನಿರೀಕ್ಷೆ

ಪಿಟಿಐ
Published 23 ಅಕ್ಟೋಬರ್ 2024, 0:30 IST
Last Updated 23 ಅಕ್ಟೋಬರ್ 2024, 0:30 IST
<div class="paragraphs"><p>ಚಂಡಮಾರುತ</p></div>

ಚಂಡಮಾರುತ

   

(ಪಿಟಿಐ ಸಂಗ್ರಹ ಚಿತ್ರ)

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮಂಗಳವಾರದ ಹೊತ್ತಿಗೆ ತೀವ್ರಗೊಂಡಿದೆ. ಅ.24 ಹಾಗೂ 25ರಂದು ಇದು ಇನ್ನಷ್ಟು ತೀವ್ರಗೊಳ್ಳಲಿದ್ದು, ಗುರುವಾರದ ಹೊತ್ತಿಗೆ ತೀವ್ರ ಚಂಡಮಾರುತ ಉಂಟಾಗುವ ಸಂಭವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುರುವಾರ ಹಾಗೂ ಶುಕ್ರವಾರದಂದು ಒಡಿಶಾ ಹಾಗೂ ಪಶ್ಚಿಮ ಬಂಗಳಾದ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಈ ದಿನಗಳಲ್ಲಿ ಜಾರ್ಖಂಡ್‌ನ ದಕ್ಷಿಣ ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ‘ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧವಾಗಿದ್ದೇವೆ’ ಎಂದು ಭಾರತೀಯ ಕರಾವಳಿ ಪಡೆ ಹೇಳಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ADVERTISEMENT

ಆಧಾರ: ಪಿಟಿಐ, ಭಾರತೀಯ ಹವಾಮಾನ ಇಲಾಖೆಯ ಪತ್ರಿಕಾ ಪ್ರಕಟಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.