ADVERTISEMENT

ಲೋಕಸಭಾ ಚುನಾವಣೆ: ಪಶ್ಚಿಮ ಬಂಗಾಳ ಸೇರಿ ಹಲವು ರಾಜ್ಯಗಳಿಗೆ ವಿಶೇಷ ವೀಕ್ಷಕರ ನೇಮಕ

ಪಿಟಿಐ
Published 2 ಏಪ್ರಿಲ್ 2024, 6:59 IST
Last Updated 2 ಏಪ್ರಿಲ್ 2024, 6:59 IST
   

ನವದೆಹಲಿ: ಮುಂಬರುವ ಚುನಾವಣೆಗಳಲ್ಲಿ ಹಲವು ಆಡಳಿತಾತ್ಮಕ, ಭದ್ರತೆ ಮತ್ತು ವೆಚ್ಚದ ಮೇಲ್ವಿಚಾರಣೆ ಉದ್ದೇಶಗಳಿಗಾಗಿ ಚುನಾವಣಾ ಆಯೋಗವು ಮಂಗಳವಾರ ವಿಶೇಷ ವೀಕ್ಷಕರನ್ನು ನೇಮಿಸಿದೆ.

ಈ ವಿಶೇಷ ವೀಕ್ಷಕರು ನಿವೃತ್ತ ಆಡಳಿತಾಧಿಕಾರಿಗಳಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಕಟ್ಟುನಿಟ್ಟಿನ ಕ್ರಮ ಮತ್ತು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಇವರಿಗೆ ವಹಿಸಲಾಗಿದೆ ಎಂದು ಚುನಾವಣಾ ಸಮಿತಿ ಹೇಳಿದೆ.

ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಬಿಹಾರ ಜತೆಗೆ ಏಕಕಾಲಕ್ಕೆ ವಿಧಾನ ಸಭಾ ಚುನಾವಣೆ ನಡೆಯಲಿರುವ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ವಿಶೇಷ ವೀಕ್ಷಕರನ್ನು ನಿಯೋಜಿಸಲಾಗಿದೆ ಎಂದು ಆಯೋಗ ಹೇಳಿದೆ.

ADVERTISEMENT

ಆಂಧ್ರಪ್ರದೇಶ , ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಒಡಿಶಾದಲ್ಲೂ ವಿಶೇಷ ವೆಚ್ಚ ವೀಕ್ಷಕರನ್ನು ನಿಯೋಜಿಸಲಾಗಿದೆ ಎಂದು ಅದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.