ADVERTISEMENT

ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ: ಮಧ್ಯಾಹ್ನ 3.30ಕ್ಕೆ ದಿನಾಂಕ ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಅಕ್ಟೋಬರ್ 2024, 4:24 IST
Last Updated 15 ಅಕ್ಟೋಬರ್ 2024, 4:24 IST
<div class="paragraphs"><p>ಭಾರತ ಚುನಾವಣಾ ಆಯೋಗ</p></div>

ಭಾರತ ಚುನಾವಣಾ ಆಯೋಗ

   

ನವದೆಹಲಿ: ಭಾರತ ಚುನಾವಣಾ ಆಯೋಗವು ಮಂಗಳವಾರ ಮಧ್ಯಾಹ್ನ 3.30ಕ್ಕೆ ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್‌ನಲ್ಲಿ ತಿಂಗಳಲ್ಲಿ ಕೊನೆಗೊಳ್ಳಲಿದೆ. ಹಾಗೂ 81 ಸದಸ್ಯರ ಜಾರ್ಖಂಡ್‌ ವಿಧಾನಸಭೆಯ ಅವಧಿ ಜನವರಿ 5, 2025ರಂದು ಮುಕ್ತಾಯವಾಗಲಿದೆ. ಅದಕ್ಕೂ ಮುನ್ನವೇ ಸಾರ್ವತ್ರಿಕ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ.

ADVERTISEMENT

ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 3.30ಕ್ಕೆ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಶಿವಸೇನೆ (ಸಿಂಧೆ ಬಣ), ಬಿಜೆಪಿ ಹಾಗೂ ಎನ್‌ಸಿಪಿ (ಅಜಿತ್ ಪವಾರ್ ಬಣ) ಮೈತ್ರಿ ಕೂಟ ಅಧಿಕಾರದಲ್ಲಿದೆ. ಮುಖ್ಯಮಂತ್ರಿ ಏಕನಾಥ್ ಸಿಂಧೆ ಅವರು ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ. 

ಜಾರ್ಖಂಡ್‌ ರಾಜ್ಯದಲ್ಲಿ ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಮೈತ್ರಿಕೂಟವು ಅಧಿಕಾರದಲ್ಲಿದೆ. ಮುಖ್ಯಮಂತ್ರಿ ಹೇಮಂತ್ ಸೋರೆನ್ ಸರ್ಕಾರ ಮುನ್ನಡೆಸುತ್ತಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.