ADVERTISEMENT

ಜಮ್ಮು ಮತ್ತು ಕಾಶ್ಮೀರ | ಪ್ರಶ್ನೆಪತ್ರಿಕೆ ಸೋರಿಕೆ: ಒಬ್ಬನ ಬಂಧನ

ಪಿಟಿಐ
Published 24 ಜೂನ್ 2024, 16:04 IST
Last Updated 24 ಜೂನ್ 2024, 16:04 IST
ಜಾರಿ ನಿರ್ದೇಶನಾಲಯ 
ಜಾರಿ ನಿರ್ದೇಶನಾಲಯ    

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ 2022ರಲ್ಲಿ ನಡೆದಿದ್ದ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿಯನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಯತಿನ್‌ ಯಾದವ್‌ ಎಂಬಾತನನ್ನು ಜಮ್ಮುವಿನಲ್ಲಿ ಬಂಧಿಸಲಾಗಿದೆ ಎಂದು ಅಧಿಕೃತ ಮೂಲಗಳು ಹೇಳಿವೆ. ಇನ್‌ಸ್ಪೆಕ್ಟರ್‌ ನೇಮಕಾತಿ ಪರೀಕ್ಷೆಯು 2022ರ ಮಾರ್ಚ್‌ 27ರಂದು ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT