ADVERTISEMENT

₹2.6 ಕೋಟಿ ಸೈಬರ್ ವಂಚನೆ ಪ್ರಕರಣ: ತಮಿಳುನಾಡಿನಲ್ಲಿ ನಾಲ್ವರ ಬಂಧನ

ಪಿಟಿಐ
Published 14 ಸೆಪ್ಟೆಂಬರ್ 2024, 9:51 IST
Last Updated 14 ಸೆಪ್ಟೆಂಬರ್ 2024, 9:51 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ನವದೆಹಲಿ: ಸಿಬಿಐ, ದೆಹಲಿ ಪೊಲೀಸರು ಹಾಗೂ ಸರ್ಕಾರದ ಇನ್ನಿತರ ಅಧಿಕಾರಿಗಳ ಸೋಗಿನಲ್ಲಿ ಜನರಿಗೆ ಕೋಟ್ಯಂತರ ರೂ‍ಪಾಯಿ ವಂಚಿಸಿದ ಪ್ರಕರಣದಲ್ಲಿ ಮತ್ತೆ ನಾಲ್ವರನ್ನು ಬಂಧಿಸಿರುವುದಾಗಿ ಜಾರಿ ನಿರ್ದೇಶನಾಲಯ ಶನಿವಾರ ತಿಳಿಸಿದೆ.

ADVERTISEMENT

ತಮಿಳರಸನ್ ಕುಪ್ಪನ್ (29), ಪ್ರಕಾಶ್ (26), ಅರವಿಂದನ್ I (23) ಮತ್ತು ಅಜಿತ್ (28) ಬಂಧಿತರು.

ಆರೋಪಿಗಳನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಶುಕ್ರವಾರ ತಮಿಳುನಾಡಿನ ಪಲ್ಲಿಪಟ್ಟುನಲ್ಲಿ ಬಂಧಿಸಲಾಗಿದೆ. ಸದ್ಯ ವಿಶೇಷ ನ್ಯಾಯಾಲಯವು ಈ ನಾಲ್ವರು ಆರೋಪಿಗಳನ್ನು ನಾಲ್ಕು ದಿನಗಳ ಅವಧಿಗೆ ಇ.ಡಿ ಕಸ್ಟಡಿಗೆ ಒಪ್ಪಿಸಿದೆ.

₹2.6 ಕೋಟಿ ಸೈಬರ್ ವಂಚನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಇವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಕಳೆದ ತಿಂಗಳು ಬೆಂಗಳೂರಿನಲ್ಲಿ ನಾಲ್ವರನ್ನು ಇ.ಡಿ ಬಂಧಿಸಿದ್ದು, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.