ADVERTISEMENT

ದಾಖಲೆ ಇಲ್ಲದ ₹32 ಕೋಟಿ ಪತ್ತೆ: ಜಾರ್ಖಂಡ್ ಸಚಿವರ ಕಾರ್ಯದರ್ಶಿ, ಮನೆಯ ಸಹಾಯಕ ಬಂಧನ

ಪಿಟಿಐ
Published 7 ಮೇ 2024, 4:23 IST
Last Updated 7 ಮೇ 2024, 4:23 IST
   

ರಾಂಚಿ: ಸೂಕ್ತ ದಾಖಲೆ ಇಲ್ಲದ ₹32 ಕೋಟಿ ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಚಿವ ಅಲಂಗೂರ್ ಅಲಂ ಕಾರ್ಯದರ್ಶಿ ಸಂಜೀವ್ ಲಾಲ್ ಮತ್ತು ಅವರ ಮನೆಗೆಲಸದ ವ್ಯಕ್ತಿಯನ್ನು ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.

ರಾತ್ರಿ ಇಡೀ ವಿಚಾರಣೆ ಬಳಿಕ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ(ಪಿಎಂಎಲ್‌ಎ) ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.

ರಾಜ್ಯದ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಅವ್ಯವಹಾರಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಲಾಲ್ ಅವರ ಮನೆಯ ಸಹಾಯಕ ಜಹಾಂಗೀರ್‌ಗೆ ಸೇರಿದ ರಾಂಚಿಯ ಫ್ಲ್ಯಾಟ್‌ವೊಂದರ ಮೇಲೆ ಸೋಮವಾರ ಇ.ಡಿ ದಾಳಿ ನಡೆಸಿತ್ತು.

ADVERTISEMENT

ಈ ವೇಳೆ ₹32 ಕೋಟಿ ನಗದು ಪತ್ತೆಯಾಗಿತ್ತು. ಇದರ ಜೊತೆಗೆ ಇತರೆಡೆ ₹3 ಕೋಟಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಒಟ್ಟು 35.23 ಕೋಟಿ ವಶಪಡಿಸಿಕೊಳ್ಳಲಾಗಿದೆ ಎಮದು ಮೂಲಗಳು ತಿಳಿಸಿವೆ.

ತಮ್ಮ ಕಡೆಯಿಂದ ಯಾವುದೇ ಅಕ್ರಮ ನಡೆದಿಲ್ಲ ಎಂದು ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಅಲಂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.