ರಾಂಚಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಸೇರಿದ ₹ 31 ಕೋಟಿ ಮೌಲ್ಯದ 8.86 ಎಕರೆ ಭೂಮಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜಪ್ತಿ ಮಾಡಿದೆ.
ಗುರುವಾರ ಈ ಕುರಿತು ಮಾಹಿತಿ ನೀಡಿದ ಇ.ಡಿ, ಹೇಮಂತ್ ಸೊರೇನ್ ಮತ್ತು ಅವರ ಸಹಚರರ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಹೇಮಂತ್ ಸೊರೇನ್ ಮತ್ತು ಇತರ ನಾಲ್ವರಾದ ಭಾನು ಪ್ರತಾಪ್ ಪ್ರಸಾದ್, ರಾಜ್ ಕುಮಾರ್ ಪಹಾನ್, ಹಿಲರಿಯಾಸ್ ಮತ್ತು ಬಿನೋದ್ ಸಿಂಗ್ ವಿರುದ್ಧ ಮಾರ್ಚ್ 30 ರಂದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯಡಿ ವಿಶೇಷ ನ್ಯಾಯಾಲಯದಲ್ಲಿ ಇ.ಡಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಅಲ್ಲದೇ 8.86 ಎಕರೆ ಜಾಗವನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತ್ತು.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಳೆದ ಜನವರಿಯಲ್ಲಿ ಸೊರೇನ್ ಅವರನ್ನು ಇ.ಡಿ ಬಂಧಿಸಿತ್ತು. ಬಂಧನಕ್ಕೂ ಮುನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದರು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದು, ರಾಂಚಿಯ ಹೊತ್ವಾರ್‌ನಲ್ಲಿರುವ ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.