ADVERTISEMENT

ಹಣ ಅಕ್ರಮ ವರ್ಗಾವಣೆ: ₹4,440 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಪಿಟಿಐ
Published 14 ಜೂನ್ 2024, 15:46 IST
Last Updated 14 ಜೂನ್ 2024, 15:46 IST
<div class="paragraphs"><p>‍ಪ್ರಾತಿನಿಧಿಕ ಚಿತ್ರ</p></div>

‍ಪ್ರಾತಿನಿಧಿಕ ಚಿತ್ರ

   

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಉತ್ತರ ಪ್ರದೇಶದ ಮಾಜಿ ಎಂಎಲ್‌ಸಿ, ಬಿಎಸ್‌ಪಿ ಮುಖಂಡ ಮೊಹಮ್ಮದ್‌ ಇಕ್ಬಾಲ್‌ ಮತ್ತು ಅವರ ಕುಟುಂಬಕ್ಕೆ ಸೇರಿದ ₹4,440 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಹೇಳಿದೆ. 

ಸಹಾರನ್‌ಪುರದಲ್ಲಿರುವ ಗ್ಲೋಕಲ್‌ ವಿಶ್ವವಿದ್ಯಾಲಯಕ್ಕೆ ಸೇರಿದ 121 ಎಕರೆ ಜಮೀನು, ಕಟ್ಟಡಗಳು ಕೂಡಾ ಇದರಲ್ಲಿ ಸೇರಿವೆ. ‘ವಿ.ವಿಗೆ ಸೇರಿದ ಆಸ್ತಿಯು ಅಬ್ದುಲ್‌ ವಹೀದ್ ಎಜುಕೇಷನಲ್‌ ಅಂಡ್‌ ಚಾರಿಟಬಲ್ ಟ್ರಸ್ಟ್’ ಹೆಸರಿನಲ್ಲಿ ನೋಂದಣಿಯಾಗಿದೆ. ಈ ಟ್ರಸ್ಟ್‌ನ ನಿರ್ವಹಣೆಯನ್ನು ಮೊಹಮ್ಮದ್‌ ಇಕ್ಬಾಲ್‌ ಮತ್ತು ಅವರ ಕುಟುಂಬದ ಸದಸ್ಯರು ನೋಡಿಕೊಳ್ಳುತ್ತಿದ್ದಾರೆ’ ಎಂದು ಇ.ಡಿ ಪ್ರಕಟಣೆ ತಿಳಿಸಿದೆ.

ADVERTISEMENT

‘ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇಕ್ಬಾಲ್‌ ಅವರು ದುಬೈನಲ್ಲಿ ತಲೆಮರೆಸಿಕೊಂಡಿದ್ದು, ಅವರ ನಾಲ್ವರು ಪುತ್ರರು ಮತ್ತು ಸಹೋದರ ವಿವಿಧ ಪ್ರಕರಣಗಳಲ್ಲಿ ಜೈಲಿನಲ್ಲಿದ್ದಾರೆ’ ಎಂದು ಇ.ಡಿ ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.