ರಾಂಚಿ: ಜಾರ್ಖಂಡ್‌ನಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಲ್ಲಿಬಂಧಿಯಾಗಿರುವ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರ ₹ 82.77 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ತಾತ್ಕಾಲಿಕವಾಗಿ ಜಪ್ತಿ ಮಾಡಿದೆ.
ʻಪಲ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಡಯಾಗ್ನೋಸ್ಟಿಕ್ ಸೆಂಟರ್ ಸೇರಿದಂತೆ ರಾಂಚಿಯಲ್ಲಿ ಇರುವ ಜಮೀನನ್ನು ಇ.ಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಸುಮಾರು ₹ 82 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ಭ್ರಷ್ಟಾಚಾರದಲ್ಲಿ ತೊಡಗಿದ್ದ ಅವರು, ತಮಗೆ ಬರುತ್ತಿದ್ದ ಕಮಿಷನ್ ಹಣವನ್ನು ಸಂಬಂಧಿಕರ ಖಾತೆಗಳಿಗೆ ವರ್ಗಾವಣೆ ಮಾಡುತ್ತಿದ್ದರು ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.
ಗಣಿ ಇಲಾಖೆ ಕಾರ್ಯದರ್ಶಿಯಾಗಿದ್ದ ಅವರನ್ನು ಜಾರಿ ನಿರ್ದೇಶನಾಲಯ ಕಳೆದ ಮೇ ತಿಂಗಳಲ್ಲಿ ಬಂಧಿಸಿತ್ತು. ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಅನುದಾನ ದುರುಪಯೋಗ ಮತ್ತಿತರ ಪ್ರಕರಣ ಸಂಬಂಧ ಅವರನ್ನು ಬಂಧಿಸಲಾಗಿದೆ.
ಸಿಂಘಾಲ್ ಅವರು 2000ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.