ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಆರೋಪದಲ್ಲಿ ಬಿಬಿಸಿ ಇಂಡಿಯಾ ಸುದ್ದಿ ವಾಹಿನಿಯ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಪ್ರಕರಣ ದಾಖಲಿಸಿಕೊಂಡಿದೆ.
ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಉಲ್ಲಂಘನೆಯನ್ನು ಇ.ಡಿ ಪರಿಶೀಲಿಸುತ್ತಿದೆ. ವಿದೇಶಿ ವಿನಿಮಯ ಉಲ್ಲಂಘನೆ ಆರೋಪಗಳಿಗೆ ಸಂಬಂಧಿಸಿದಂತೆ ಹಣಕಾಸಿನ ಹೇಳಿಕೆ ನೀಡುವಂತೆ ಬಿಬಿಸಿಗೆ ಹೇಳಿದೆ.
ಫೆಬ್ರುವರಿ ತಿಂಗಳಲ್ಲಿ ಬಿಬಿಸಿ ಸಂಸ್ಥೆಯ ದೆಹಲಿಯ ಕಚೇರಿಗೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆಯು ಪರಿಶೀಲನೆ ನಡೆಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.