ನವದೆಹಲಿ/ಜಲಂಧರ್: ಪಂಜಾಬ್‌ನಲ್ಲಿ ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯ ತನಿಖೆ ಸಂಬಂಧ ಜಾರಿ ನಿರ್ದೇಶನಾಲಯವು (ಇ.ಡಿ) ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದೆ.
ಜಲಂಧರ್‌ನಲ್ಲಿರುವ ಇ.ಡಿ ವಲಯ ಕಚೇರಿಯಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್) ಚನ್ನಿ ಅವರನ್ನು ವಿಚಾರಣೆ ನಡೆಸಲಾಯಿತು. ಸುದೀರ್ಘ ವಿಚಾರಣೆ ಬಳಿಕ ಅವರು ಬುಧವಾರ ತಡರಾತ್ರಿ ಇಡಿ ಕಚೇರಿಯಿಂದ ನಿರ್ಗಮಿಸಿದರು.
ಈ ಪ್ರಕರಣದಲ್ಲಿ ಚನ್ನಿ ಅವರ ಸೋದರ ಅಳಿಯ ಭೂಪೇಂದ್ರ ಸಿಂಗ್ ಅಲಿಯಾಸ್ ಹನಿ ಅವರನ್ನು ಪಂಜಾಬ್ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಬಂಧಿಸಲಾಗಿತ್ತು. ಸದ್ಯ ಹನಿ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದಲ್ಲಿ ಭೂಪೇಂದ್ರ ಸಿಂಗ್ ಅವರೊಂದಿಗೆ ಇರುವ ಸಂಪರ್ಕ, ಮುಖ್ಯಮಂತ್ರಿ ಕಚೇರಿಗೆ ಹನಿ ಅವರು ಭೇಟಿ ನೀಡಿದ್ದ ಬಗ್ಗೆ ಹಾಗೂ ಅಕ್ರಮ ಮರಳುಗಾರಿಕೆ ವಿರುದ್ಧದ ಕಾರ್ಯಾಚರಣೆ ನಡೆಸುತ್ತಿದ್ದ ಕೆಲವು ಅಧಿಕಾರಿಗಳನ್ನು ಏಕಾಏಕಿ ವರ್ಗಾವಣೆ ಮಾಡಿದ್ದ ಕುರಿತು ವಿಚಾರಣೆ ವೇಳೆ ಚನ್ನಿ ಅವರನ್ನು ಪ್ರಶ್ನಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.