ರಾಂಚಿ: ಭೂ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ ಎಂದು ಸೋಮವಾರ ಮೂಲಗಳು ತಿಳಿಸಿವೆ.
ನಾಳೆಯೊಳಗೆ ಇಲ್ಲಿನ ಇ.ಡಿ ಕಚೇರಿಯಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಹೇಳಿಕೆಯನ್ನು ದಾಖಲಿಸಲು ಕೇಳಲಾಗಿದೆ.
ಇದು ಸೊರೇನ್ ಅವರಿಗೆ ನೀಡಲಾದ ಆರನೇ ನೋಟಿಸ್ ಆಗಿದೆ, ಆದರೆ ಅವರು ಇ.ಡಿ ಕ್ರಮದಿಂದ ರಕ್ಷಣೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಅವರನ್ನು ಪದಚ್ಯುತಿಗೊಳಿಸುವುದಾಗಲೀ, ಬಂಧಿಸುವ ಕ್ರಮಗಳನ್ನು ಕೈಗೊಳ್ಳಲಾಗಿಲ್ಲ.
ಜಾರ್ಖಂಡ್‌ನಲ್ಲಿ ಭೂಮಿಯ ಮಾಲೀಕತ್ವದ ಅಕ್ರಮ ಬದಲಾವಣೆಯ ಬೃಹತ್ ದಂಧೆ ನಡೆಯುತ್ತಿದೆ ಎಂಬ ಆರೋಪದಡಿ ಇ.ಡಿ ತನಿಖೆ ನಡೆಸುತ್ತಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 14 ಜನರನ್ನು ಇ.ಡಿ ಬಂಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.