ADVERTISEMENT

ಅಬಕಾರಿ ಹಗರಣ: ಕೇಜ್ರಿವಾಲ್‌ಗೆ ಮತ್ತೆ ಸಮನ್ಸ್‌ ಜಾರಿ ಮಾಡಿದ ಇ.ಡಿ– ಇದು 6ನೇ ಬಾರಿ

ಪಿಟಿಐ
Published 14 ಫೆಬ್ರುವರಿ 2024, 13:21 IST
Last Updated 14 ಫೆಬ್ರುವರಿ 2024, 13:21 IST
<div class="paragraphs"><p>ಅರವಿಂದ ಕೇಜ್ರಿವಾಲ್</p></div>

ಅರವಿಂದ ಕೇಜ್ರಿವಾಲ್

   

ನವದೆಹಲಿ: ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಮತ್ತೊಂದು ಸಮನ್ಸ್ ಜಾರಿ ಮಾಡಿದ್ದು, ಫೆ. 19ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಕೇಜ್ರಿವಾಲ್‌ಗೆ ನೀಡಿದ ಆರನೇ ಸಮನ್ಸ್ ಇದಾಗಿದೆ.

ADVERTISEMENT

ಮತ್ತೊಂದೆಡೆ ವಿಚಾರಣೆಗೆ ಹಾಜರಾಗದೇ ಇರುವುದರ ವಿರುದ್ಧ ಇ.ಡಿ ನ್ಯಾಯಾಲಯದ ಮೆಟ್ಟಿಲೇರಿದ್ದು, ಫೆ.17ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ನ್ಯಾಯಾಲಯ ಆದೇಶಿಸಿದೆ.

‘ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್ ಸೇರಿದಂತೆ ಇತರರ ಪಾತ್ರವನ್ನು ಬಯಲಿಗೆಳೆಯುವ ಉದ್ದೇಶವನ್ನು ತನಿಖಾ ಸಂಸ್ಥೆ ಹೊಂದಿದ್ದು, ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಹಲವು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ಉದ್ದೇಶಪೂರ್ವಕವಾಗಿ ಅವುಗಳನ್ನು ಕಡೆಗಣಿಸಿ ಅವಿಧೇಯತೆ ತೋರಿದ್ದಾರೆ’ ಎಂದು ನ್ಯಾಯಾಲಯದಲ್ಲಿ ಇ.ಡಿ ದೂರಿತ್ತು.

ಕೇಜ್ರಿವಾಲ್‌ ಅವರಿಗೆ ಕಳೆದ ವರ್ಷ ನವೆಂಬರ್ 2 ಮತ್ತು ಡಿಸೆಂಬರ್ 21, ಈ ವರ್ಷ ಜನವರಿ 3 ಮತ್ತು 18, ಫೆಬ್ರುವರಿ 2ರಂದು ಸಮನ್ಸ್‌ ಜಾರಿ ಮಾಡಲಾಗಿತ್ತು.

ಈ ಎಲ್ಲ ಸಮನ್ಸ್‌ಗಳನ್ನು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಕರೆದಿರುವ ಕೇಜ್ರಿವಾಲ್ ಚುನಾವಣಾ ಪ್ರಚಾರಕ್ಕೆ ಹೋಗದಂತೆ ತಡೆಯಲು ಮಾಡಿರುವ ಪಿತೂರಿಯಾಗಿದೆ’ ಎಂದು ದೂರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.