ADVERTISEMENT

ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ 8ನೇ ಬಾರಿ ಸಮನ್ಸ್ ನೀಡಿದ ಇ.ಡಿ

ಪಿಟಿಐ
Published 27 ಫೆಬ್ರುವರಿ 2024, 9:33 IST
Last Updated 27 ಫೆಬ್ರುವರಿ 2024, 9:33 IST
<div class="paragraphs"><p> ಕೇಜ್ರಿವಾಲ್‌ </p></div>

ಕೇಜ್ರಿವಾಲ್‌

   

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯವು ಸತತ 8 ನೇ ಬಾರಿಗೆ ಸಮನ್ಸ್‌ ನೀಡಿದೆ. 7 ನೇ ಬಾರಿಯೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮತ್ತೆ ಸಮನ್ಸ್‌ ಜಾರಿ ಮಾಡಲಾಗಿದೆ.

ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.

ADVERTISEMENT

ಕೇಜ್ರಿವಾಲ್ ಅವರು ವಿಚಾರಣೆಗೆ ಹಾಜರಾಗದ ಕುರಿತು ಜಾರಿ ನಿರ್ದೇಶನಾಲಯ (ಇಡಿ)ವನ್ನು ನಗರ ನ್ಯಾಯಾಲಯವು ಸಂಪರ್ಕಿಸಿ  ಮಾಹಿತಿ ಪಡೆದಿದ್ದು, ಮಾರ್ಚ್ 16 ರಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಸೂಚಿಸಿದೆ.

ಪ್ರಕರಣವು ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿರುವಾಗ ಹೊಸ ಸಮನ್ಸ್ ನೀಡುವುದು ತಪ್ಪು ಎಂದ ಕೇಜ್ರಿವಾಲ್ ಅವರ ವಾದವನ್ನು ತಿರಸ್ಕರಿಸಿದ ಜಾರಿ ನಿರ್ದೇಶನಾಲಯವು 8ನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.