ADVERTISEMENT

ಕೇಜ್ರಿವಾಲ್‌ ಜಾಮೀನಿಗೆ ಇ.ಡಿ ವಿರೋಧ

ಪಿಟಿಐ
Published 7 ಜೂನ್ 2024, 16:12 IST
Last Updated 7 ಜೂನ್ 2024, 16:12 IST
ಅರವಿಂದ ಕೇಜ್ರಿವಾಲ್‌
ಅರವಿಂದ ಕೇಜ್ರಿವಾಲ್‌   

ನವದೆಹಲಿ: ಅಬಕಾರಿ ಹಗರಣದ ಜತೆ ನಂಟು ಹೊಂದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸಲ್ಲಿಸಿರುವ ಅರ್ಜಿಗೆ ಜಾರಿ ನಿರ್ದೇಶನಾಲಯ (ಇ.ಡಿ) ವಿರೋಧ ದಾಖಲಿಸಿದೆ. 

‘ಕೇಜ್ರಿವಾಲ್‌ ಅವರು ಗಂಭೀರ ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ. ಅದಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ತಮ್ಮ ಬಳಿ ಇವೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ, ಈ ಹಗರಣಕ್ಕೆ ಸಂಬಂಧಿಸಿದ ತನಿಖೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ’ ಎಂದು ಇ.ಡಿ ದೆಹಲಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರಿಗೆ ತಿಳಿಸಿದೆ. 

ನ್ಯಾಯಾಧೀಶರು ಈ ಕುರಿತ ಅರ್ಜಿಯ ವಿಚಾರಣೆಯನ್ನು ಇದೇ 14ಕ್ಕೆ ಮುಂದೂಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.