ಕೋಲ್ಕತ್ತ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರನ್ನು ಜಾರಿ ನಿರ್ದೇಶನಾಲಯ ಬುಧವಾರ 9 ತಾಸು ವಿಚಾರಣೆ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದರು.
ಇ.ಡಿ ಕಚೇರಿಯಿಂದ ಹೊರಬಂದ ಬಳಿಕ ಮಾತನಾಡಿದ ಬ್ಯಾನರ್ಜಿ,‘ ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ‘ ಸಭೆಗೆ ಹಾಜರಾಗುವುದನ್ನು ತಡೆಯುವ ಸಲುವಾಗಿ ವಿಚಾರಣೆಗೆ ಕರೆಯಲಾಗಿತ್ತು. ಇ.ಡಿ ಅಧಿಕಾರಿಗಳು ತಮ್ಮ ಸಮಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಅದಕ್ಕಾಗಿ ನಾನು ಅವರನ್ನು ದೂರುವುದಿಲ್ಲ. ‘ರಾಜಕೀಯ ಗುರು’ಗಳಿಗಾಗಿ ಹಾಗೆ ಮಾಡುತ್ತಾರೆ. ಸತತ 72 ತಾಸು ವಿವಾರಣೆ ನಡೆಸಿದರೂ ಹೆದರುವುದಿಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.