ADVERTISEMENT

ತಮಿಳುನಾಡಿನ ಮಾಜಿ ಸಚಿವ ವೈತಿಯಲಿಂಗಂ ವಿರುದ್ಧ ಇ.ಡಿ ಶೋಧ

ಪಿಟಿಐ
Published 23 ಅಕ್ಟೋಬರ್ 2024, 16:18 IST
Last Updated 23 ಅಕ್ಟೋಬರ್ 2024, 16:18 IST
<div class="paragraphs"><p>ಇ.ಡಿ</p></div>

ಇ.ಡಿ

   

ಚೆನ್ನೈ: ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ  ತಮಿಳುನಾಡಿನ ಮಾಜಿ ಸಚಿವ ವೈತಿಯಲಿಂಗಂ ಅವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಚೆನ್ನೈ ಸೇರಿದಂತೆ ತಮಿಳುನಾಡಿನ ನಾಲ್ಕು ನಗರಗಳಲ್ಲಿ ಇ.ಡಿ ಶೋಧ ನಡೆಸಿತು.

ADVERTISEMENT

ಎಐಎಡಿಎಂಕೆ ನೇತೃತ್ವದ ಸರ್ಕಾರದಲ್ಲಿ ವಸತಿ ಸಚಿವರಾಗಿದ್ದ ವೈತಿಯಲಿಂಗಂ ಅವರು ಚೆನ್ನೈ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳಿಗೆ ಅನುಮತಿ ನೀಡಿದ್ದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ತನಿಖೆ ನಡೆಸುತ್ತಿದೆ.

ಮಾಜಿ ಸಚಿವರು ಕೆಲವು ಕಂಪನಿಗಳಿಂದ ಹಣವನ್ನು ಸಾಲವಾಗಿ ಸ್ವೀಕರಿಸಿದ್ದು, ಹಣದ ಅಕ್ರಮ ವರ್ಗಾವಣೆ ನಡೆದಿದೆ ಎಂದು ಆರೋಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.