ADVERTISEMENT

ಇ.ಡಿ ದಾಳಿ: ₹ 1ಕೋಟಿ ನಗದು ವಶ

ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧದ ಭೂಕಬಳಿಕೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 15:59 IST
Last Updated 22 ಜೂನ್ 2024, 15:59 IST
.
.   

ರಾಂಚಿ (ಪಿಟಿಐ): ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತಿತರರ ವಿರುದ್ಧ ದಾಖಲಾಗಿರುವ ಭೂಕಬಳಿಕೆ ಪ್ರಕರಣದ ನಂಟಿನ ಹಣ ಅಕ್ರಮ ವರ್ಗಾವಣೆಯ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು (ಇ.ಡಿ), ರಾಂಚಿಯಲ್ಲಿ ದಾಳಿ ನಡೆಸಿ ₹ 1 ಕೋಟಿ ನಗದು ಹಾಗೂ 100 ಗುಂಡುಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಕಮಲೇಶ್ ಸಿಂಗ್ ಎಂಬುವರಿಗೆ ಸೇರಿರುವ ಕಾಂಕೆ ರಸ್ತೆಯ ಆವರಣದಿಂದ ಶುಕ್ರವಾರ ಸಂಜೆ ಇವುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಾಜಿ ಮುಖ್ಯಮಂತ್ರಿ, ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ವಿರುದ್ಧ ದಾಖಲಾಗಿರುವ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿಗಳು ನಡೆದಿವೆ. ಆದರೆ, ಬೇರೆ ಭೂಕಬಳಿಕೆಗೆ ಸಂಬಂಧಿಸಿವೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ರಾಂಚಿಯಲ್ಲಿ ಸೊರೆನ್ ಅವರು ₹ 266 ಕೋಟಿ ಮೌಲ್ಯದ ಭೂಮಿಯನ್ನು ಕಬಳಿಸಿದ್ದಾರೆ ಎಂಬ ಆರೋಪದ ತನಿಖೆ ನಡೆಸುತ್ತಿರುವ ಇ.ಡಿ.ಯು, ಈ ಪ‍್ರಕರಣಕ್ಕೆ ಸಂಬಂಧಿಸಿದಂತೆ ಸೊರೆನ್, ಐಎಎಸ್ ಅಧಿಕಾರಿ ಛಾವಿ ರಂಜನ್, ಭಾನು ಪ್ರತಾಪ್ ಪ್ರಸಾದ್ ಸೇರಿದಂತೆ 25 ಜನರನ್ನು ಬಂಧಿಸಿದೆ.

ಈ ಆರೋಪವನ್ನು ತಳ್ಳಿಹಾಕಿರುವ ಸೊರೆನ್, ಕೇಂದ್ರ ಸರ್ಕಾರವು ರಾಜಕೀಯ ದ್ವೇಷದ ಕ್ರಮ ಜರುಗಿಸುತ್ತಿದೆ ಎಂದು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.