ADVERTISEMENT

ಜಾರ್ಖಂಡ್‌ ಸಿಎಂ ಹೇಮಂತ್‌ ಸೊರೇನ್‌ ಆಪ್ತನ ಮನೆ ಮೇಲೆ ED ದಾಳಿ

ಪಿಟಿಐ
Published 3 ಜನವರಿ 2024, 4:38 IST
Last Updated 3 ಜನವರಿ 2024, 4:38 IST
ಜಾರಿ ನಿರ್ದೇಶನಾಲಯ
ಜಾರಿ ನಿರ್ದೇಶನಾಲಯ   

ಪಿಟಿಐ ಚಿತ್ರ

ರಾಂಚಿ/ಜೈಪುರ: ಅಕ್ರಮ ಗಣಿಗಾರಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ, ಜಾರ್ಖಂಡ್ ಮತ್ತು ರಾಜಸ್ಥಾನದ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಂದು (ಬುಧವಾರ) ಶೋಧ ನಡೆಸಿದೆ.

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮಾಧ್ಯಮ ಸಲಹೆಗಾರ ಅಭಿಷೇಕ್ ಪ್ರಸಾದ್ ಅಲಿಯಾಸ್ ಪಿಂಟು, ಹಜಾರಿಬಾಗ್‌ನ ಉಪ ಪೊಲೀಸ್‌ ವರಿಷ್ಠಾಧಿಕಾರಿ ರಾಜೇಂದ್ರ ದುಬೆ, ಮಾಜಿ ಶಾಸಕ ಪಪ್ಪು ಯಾದವ್ ಸೇರಿದಂತೆ ಹಲವು ಅಧಿಕಾರಿಗಳ ನಿವಾಸಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಜಾರ್ಖಂಡ್‌ ಅಕ್ರಮ ಗಣಿಗಾರಿಕೆಗೆ ಸಂಬಂಧಪಟ್ಟಂತೆ ₹100 ಕೋಟಿ ಹಣದ ಮೂಲದ ಜಾಡು ಹಿಡಿದಿರುವ ಜಾರಿ ನಿರ್ದೇಶನಾಲಯ, 2022ರಿಂದ ತನಿಖೆ ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.