ADVERTISEMENT

ಹಣ ಅಕ್ರಮ ವರ್ಗಾವಣೆ ಆರೋಪ: ಪಂಜಾಬ್ ಸಂಸದ ಸಂಜೀವ್ ಅರೋರಾ ಮನೆ ಮೇಲೆ ಇ.ಡಿ. ದಾಳಿ

ಪಿಟಿಐ
Published 7 ಅಕ್ಟೋಬರ್ 2024, 5:03 IST
Last Updated 7 ಅಕ್ಟೋಬರ್ 2024, 5:03 IST
ಇ.ಡಿ 
ಇ.ಡಿ    

ಗುರುಗ್ರಾಮ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಪಂಜಾಬ್‌ ರಾಜ್ಯ ಸಭಾ ಸದಸ್ಯ ಸಂಜೀವ್‌ ಅರೋರಾ ಹಾಗೂ ಇತರರಿಗೆ ಸೇರಿದ ಸ್ಥಳಗಳಲ್ಲಿ ಸೋಮವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಹರಿಯಾಣದ ಗುರುಗ್ರಾಮದಲ್ಲಿರುವ 61 ವರ್ಷದ ಸಂಸದರ ಮನೆಯಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಎಎಪಿ ಮುಖಂಡ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರು ಈ ಸಂಬಂಧ ಎಕ್ಸ್‌/ಟ್ವಿಟರ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಉದ್ಯಮಿಯೂ ಆಗಿರುವ ತಮ್ಮ ಪಕ್ಷದ ಸಂಸದರ ಮೇಲೆ ಪಕ್ಷವನ್ನು ಒಡೆಯುವ ಉದ್ದೇಶದಿಂದ ದಾಳಿ ನಡೆಸಲಾಗಿದೆ. ಎಎಪಿ ನಾಯಕರು ಇದಕ್ಕೆಲ್ಲ ಹೆದರುವುದಿಲ್ಲ ಎಂದು ಹೇಳಿದ್ದಾರೆ.

ADVERTISEMENT

ಭೂ ಹಗರಣಕ್ಕೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌) ಅಡಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.