ADVERTISEMENT

ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳದ 22 ಕಡೆಗಳಲ್ಲಿ ಇ.ಡಿ ದಾಳಿ

ಪಿಟಿಐ
Published 13 ಏಪ್ರಿಲ್ 2023, 4:35 IST
Last Updated 13 ಏಪ್ರಿಲ್ 2023, 4:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಂಚಿ: ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ಜಾರ್ಖಂಡ್, ಬಿಹಾರ ಮತ್ತು ಪಶ್ಚಿಮ ಬಂಗಾಳದ 22 ಕಡೆಗಳಲ್ಲಿ ಗುರುವಾರ ದಾಳಿ ನಡೆಸಿದ್ದಾರೆ.

ಈ ಹಿಂದೆ ರಾಂಚಿಯಲ್ಲಿ ಡೆಪ್ಯುಟಿ ಕಮಿಷನರ್ ಆಗಿದ್ದ ಜಾರ್ಖಂಡ್ ಕೇಡರ್ ಐಎಎಸ್ ಅಧಿಕಾರಿ ಛವಿ ರಂಜನ್ ಅವರಿಗೆ ಸಂಬಂಧಪಟ್ಟ ಸ್ಥಳಗಳಲ್ಲೂ ಶೋಧ ಕಾರ್ಯ ನಡೆಯುತ್ತಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಅಡಿಯಲ್ಲಿ ಖಾಸಗಿ ವ್ಯಕ್ತಿಗಳು ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದಂತೆ ವಿವಿಧೆಡೆ ದಾಳಿ ನಡೆಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.