ನವದೆಹಲಿ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಮನೆ ಮೇಲಿನ ದಾಳಿ ವೇಳೆ ₹ 20 ಕೋಟಿ ನಗದನ್ನು ವಶಕ್ಕೆ ಪಡೆದಿರುವುದಾಗಿ ಜಾರಿ ನಿರ್ದೇಶನಾಲಯ ಹೇಳಿದೆ.
‘ಇದು ಎಸ್ಎಸ್‌ಸಿ ಹಗರಣಕ್ಕೆ ಸಂಬಂಧಿಸಿದ ಹಣವಿರಬಹುದು ಎಂದು ಶಂಕಿಸಲಾಗಿದೆ’ಎಂದು ಹೇಳಿಕೆ ತಿಳಿಸಿದೆ.
ಶೋಧ ಕಾರ್ಯಾಚರಣೆ ನಡೆಸಿದ ಇ.ಡಿ ಅಧಿಕಾರಿಗಳು, ಬ್ಯಾಂಕ್ ಸಿಬ್ಬಂದಿಯ ಸಹಾಯ ಪಡೆದು ನೋಟು ಎಣಿಕೆ ಯಂತ್ರಗಳ ಮೂಲಕ ನಗದನ್ನು ಲೆಕ್ಕಾಚಾರ ಮಾಡಿದ್ದಾರೆ.
ಅರ್ಪಿತಾ ಮುಖರ್ಜಿಗೆ ಸಂಬಂಧಿಸಿದ ಸ್ಥಳಗಳಲ್ಲಿ 20ಕ್ಕೂ ಅಧಿಕ ಮೊಬೈಲ್ ಫೋನ್‌ಗಳನ್ನೂ ಜಪ್ತಿ ಮಾಡಲಾಗಿದೆ.
ಇದೇವೇಳೆ, ಶಿಕ್ಷಣ ಖಾತೆಯ ರಾಜ್ಯ ಸಚಿವ ಪರೇಶ್ ಸಿ ಅಧಿಕಾರಿ, ಶಾಸಕ ಮಾಣಿಕ್ ಭಟ್ಟಾಚಾರ್ಯ ಸೇರಿ ಹಲವರ ಮೇಲೆ ಇ.ಡಿ ದಾಳಿ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.