ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಜಾರಿ ನಿರ್ದೆಶನಾಲಯದ(ಇ.ಡಿ) ಅಧಿಕಾರಿಗಳು ಸಮನ್ಸ್ ನೀಡಲು ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದಾರೆ.
ಇ.ಡಿ ತಂಡವು ಸಮನ್ಸ್ ನೀಡಲು ಅವರ ಮನೆಗೆ ತೆರಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದಲ್ಲಿ ಹಲವು ಬಾರಿ ಇ.ಡಿ ನೀಡಿರುವ ಸಮನ್ಸ್ ಅನ್ನು ಕೇಜ್ರಿವಾಲ್ ಧಿಕ್ಕರಿಸಿದ್ದಾರೆ.
ಕೇಜ್ರಿವಾಲ್ ಅರ್ಜಿ ಕುರಿತಂತೆ ಇಂದು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಮತ್ತು ಮನೋಜ್ ಜೈನ್ ಅವರಿದ್ದ ವಿಭಾಗೀಯ ಪೀಠ, ಪ್ರಕರಣದಲ್ಲಿ ತಮ್ಮ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ರಕ್ಷಣೆ ನೀಡಬೇಕೆಂದು ಕೋರಿದ್ಧ ಕೇಜ್ರಿವಾಲ್ ಮನವಿಯನ್ನು ತಳ್ಳಿಹಾಕಿತ್ತು.
ಎಎಪಿ ನಾಯಕನ ಅರ್ಜಿಯ ಮುಂದಿನ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ನ್ಯಾಯಾಲಯ ಮುಂದೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.