ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆ ಸಂಬಂಧ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಇಂದು ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರ ನವದೆಹಲಿಯ ನಿವಾಸಕ್ಕೆ ಭೇಟಿ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.
ಭೂ ವಂಚನೆ ಪ್ರಕರಣದಲ್ಲಿ ಇತ್ತೀಚಿನ ಹಣ ವರ್ಗಾವಣೆ ಸಂಬಂಧ ಜನವರಿ 20ರಂದು ರಾಂಚಿಯಲ್ಲಿರುವ ಅವರ ಅಧಿಕೃತ ನಿವಾಸದಲ್ಲಿ ಇ.ಡಿ ಅಧಿಕಾರಿಗಳು ಮಾಡಿದ್ದ ದಾಳಿಗೆ ಸಂಬಂಧಿಸಿದ ತನಿಖೆ ಇದಾಗಿದೆ ಎಂದೂ ಮೂಲಗಳು ಖಚಿತಪಡಿಸಿವೆ.
ಜನವರಿ 29 ಅಥವಾ ಜನವರಿ 31ರಂದು ವಿಚಾರಣೆಗೆ ಅವರ ಲಭ್ಯತೆಯನ್ನು ಖಚಿತಪಡಿಸುವಂತೆ ಕಳೆದ ವಾರ ಇ.ಡಿ ಸೊರೇನ್ ಅವರಿಗೆ ಹೊಸ ಸಮನ್ಸ್ ನೀಡಿತ್ತು ಎಂದು ಮೂಲಗಳು ತಿಳಿಸಿವೆ.
ಜಾರ್ಖಂಡ್‌ನಲ್ಲಿ ಮಾಫಿಯಾದಿಂದ ಅಪಾರ ಪ್ರಮಾಣದ ಭೂಮಿಯ ಅಕ್ರಮ ಪರಭಾರೆಗೆ ಸಂಬಂಧಿಸಿದ ತನಿಖೆ ಇದಾಗಿದೆ ಎಂದೂ ಮೂಲಗಳಿಂದ ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.