ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆಗೆ ಸಂಬಂಧಿಸಿದಂತೆ ಕ್ಯಾಪ್ರಿಕಾರ್ನಿಯನ್ ಶಿಪ್ಪಿಂಗ್ & ಲಾಜಿಸ್ಟಿಕ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ನಿರ್ದೇಶಕರಾದ ವಿಜಯ್ ಕುಮಾರ್ ಶುಕ್ಲಾ ಮತ್ತು ಸಂಜಯ್ ಗೋಸ್ವಾಮಿ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಕಾರ್ಯಾಚರಣೆ ವೇಳೆ ವಾಷಿಂಗ್ ಮೆಷಿನ್‌ನಲ್ಲಿ ಬಚ್ಚಿಟ್ಟಿದ್ದ ದಾಖಲೆ ಇಲ್ಲದ ₹2.54 ಕೋಟಿ ನಗದು ಪತ್ತೆಯಾಗಿದೆ. ಜತೆಗೆ ಪ್ರಮುಖ ದಾಖಲೆಗಳು, ಡಿಜಿಟಲ್ ಸಾಧನಗಳನ್ನು ವಶಕ್ಕೆ ಪಡೆಯಲಾಗಿದ್ದು, 47 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯವು ತನ್ನ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಫೋಟೊ ಸಮೇತ ಮಾಹಿತಿ ಹಂಚಿಕೊಂಡಿದೆ.
ಪ್ರಕರಣಕ್ಕೆ ಸಂಬಂಧಿಸಿ ಲಕ್ಷ್ಮಿಟನ್ ಮ್ಯಾರಿಟೈಮ್, ಹಿಂದೂಸ್ತಾನ್ ಇಂಟರ್‌ನ್ಯಾಷನಲ್, ರಾಜನಂದಿನಿ ಮೆಟಲ್ಸ್ ಲಿಮಿಟೆಡ್, ಸ್ಟಾವರ್ಟ್ ಅಲಾಯ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಭಾಗ್ಯನಗರ ಲಿಮಿಟೆಡ್, ವಿನಾಯಕ್ ಸ್ಟೀಲ್ಸ್ ಲಿಮಿಟೆಡ್, ವಶಿಷ್ಟ ಕನ್ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ನಿರ್ದೇಶಕರಾದ ಸಂದೀಪ್ ಗಾರ್ಗ್, ವಿನೋದ್ ಕೇಡಿಯಾ ಅವರಿಗೆ ಸಂಬಂಧಿಸಿ ದೆಹಲಿ, ಹೈದರಾಬಾದ್, ಮುಂಬೈ, ಕುರುಕ್ಷೇತ್ರ ಮತ್ತು ಕೋಲ್ಕತ್ತದ ವಿವಿಧ ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.